ತುಮಕೂರು: ಕರ್ನಾಟಕ ಬಂದ್ ಗೆ ಸಿದ್ಧಗಂಗಾ ಮಠದ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಬೆಂಬಲ ವ್ಯಕ್ತಪಡಿಸಿದ್ದು, ವಿವಿಧ ಸಂಘಟನೆಗಳ ಮನವಿಗೆ ಸ್ಪಂದಿಸಿ ಪ್ರತಿಭಟನೆಯಲ್ಲಿ ಭಾಗಿಯಾಗಲು ಸ್ವಾಮೀಜಿ ಒಪ್ಪಿಗೆ ಸೂಚಿಸಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಿಂದಲೂ ಅನೇಕ ಸ್ವಾಮೀಜಿಗಳು ಬಂದ್ ಗೆ ಬೆಂಬಲ ಸೂಚಿಸಿದ್ದು, ಅಂತೆಯೇ ಸಿದ್ಧಗಂಗಾ ಮಠದ ಸ್ವಾಮೀಜಿ ಕೂಡ ಕರ್ನಾಟಕ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಕುಂಚಿಟಿಗರ ಮಠದ ಹನುಮಂತನಾಥ ಸ್ವಾಮೀಜಿ ಸೇರಿ ವಿವಿಧ ಮಠದ ಸ್ವಾಮೀಜಿಗಳು ಬಂದ್ ಗೆ ಬೆಂಬಲ. ವ್ಯಕ್ತಪಡಿಸಿದ ಬಗ್ಗೆ ಸಂಘಟನೆಗಳ ಮುಖಂಡರು ಮಾಹಿತಿ ನೀಡಿದ್ದಾರೆ.