ಪಿರಿಯಾಪಟ್ಟಣ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಟ್ಟದಪುರ ಯೋಜನಾ ಕಚೇರಿಯ ಕಿತ್ತೂರು ವಲಯದ ಮಾಕೋಡು ಕಾರ್ಯಕ್ಷೇತ್ರದ ಮಾತೃಶ್ರೀ ಜ್ಞಾನ ವಿಕಾಸ ಕೇಂದ್ರದಲ್ಲಿ ಸ್ವ ಉದ್ಯೋಗ ಪ್ರೇರಣಾ ಶಿಬಿರ ನಡೆಯಿತು.
ಸಂಸ್ಥೆಯ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಗ್ರಾಮಾಂತರ ಪ್ರದೇಶದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವ ಉದ್ಯೋಗ ಪ್ರೇರಣಾ ಶಿಬಿರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ, ಮಹಿಳೆಯರು ಕುಟುಂಬ ನಿರ್ವಹಣೆ ಜೊತೆ ಸ್ವಂತ ಉದ್ಯೋಗಗಳನ್ನು ರೂಡಿಸಿಕೊಳ್ಳುವ ಮೂಲಕ ಆರ್ಥಿಕವಾಗಿ ಸಬಲರಾಗಿ ಸಮಾಜದ ಮುಖ್ಯ ವಾಹಿನಿಗೆ ಬರುವಂತೆ ಕರೆ ನೀಡಿದರು ಈ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆ ವತಿಯಿಂದ ಹಲವು ನೂತನ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಸಂಪನ್ಮೂಲ ವ್ಯಕ್ತಿ ಹಿರಿಯ ಉಪನ್ಯಾಸಕರಾದ ಪಾಲ್ ರಾಜ್, ಸ್ವ ಉದ್ಯೋಗದಲ್ಲಿ ಮಹಿಳೆಯರಿಗೆ ಇರುವ ಅವಕಾಶಗಳ ಬಗ್ಗೆ ಮತ್ತು ಮಹಿಳೆಯರು ಮನೆಯಲ್ಲಿ ನಡೆಸಬಹುದಾದ ಸ್ವ ಉದ್ಯೋಗದ ಬಗ್ಗೆ ಮಾಹಿತಿ ನೀಡಿ ಮಾತನಾಡಿ ರುಡ್ ಸೆಟ್ ಸಂಸ್ಥೆ ವತಿಯಿಂದ ಹಳ್ಳಿಗಳಲ್ಲಿ ಸ್ವ ಉದ್ಯೋಗ ತರಬೇತಿ ನೀಡುತ್ತೇವೆ ಮತ್ತು ಸಂಸ್ಥೆಯಲ್ಲಿ ತರಬೇತಿ ಪಡೆಯುವವರಿಗೆ ಉಚಿತ ಊಟ ಮತ್ತು ವಸತಿ ನೀಡಲಾಗುತ್ತಿದ್ದು ಸದ್ಬಳಕೆ ಮಾಡಿಕೊಳ್ಳುವಂತೆ ಕೋರಿದರು.
ಈ ವೇಳೆ ವಿಶೇಷ ಚೇತನ ಶಿವಕುಮಾರ್ ಅವರಿಗೆ ವೀಲ್ ಚೇರ್ ವಿತರಣೆ ಮಾಡಲಾಯಿತು. ಮೀನಾಕ್ಷಿ ಮತ್ತು ಚಿಕ್ಕಣ್ಣ ಅವರಿಗೆ ಸಂಸ್ಥೆಯಿಂದ ಪ್ರತಿ ತಿಂಗಳು ಒಂದು ಸಾವಿರ ಮಾಸಾಶನ ಮಂಜೂರು ಮಾಡಿದ್ದ ಪತ್ರ ವಿತರಿಸಲಾಯಿತು.
ಈ ಸಂದರ್ಭ ಶಿಕ್ಷಕ ಲೋಕೇಶ್, ಬೆಟ್ಟದಪುರ ವಲಯ ಯೋಜನಾಧಿಕಾರಿ ಸಂತೋಷ್ ಕುಮಾರ್ ಜೈನ್, ಮಾಕೊಡು ಒಕ್ಕೂಟದ ಉಪಾಧ್ಯಕ್ಷೆ ನೇತ್ರಾವತಿ, ಗ್ರಾಮ ಪಂಚಾಯಿತಿ ಸದಸ್ಯೆ ಶಶಿಕಲಾ, ವಲಯ ಮೇಲ್ವಿಚಾರಕ ಹೇಮಂತ್, ಜ್ಞಾನವಿಕಾಸ ಸಮನ್ವಯಾಧಿಕಾರಿ ಮಮಿತಾ, ಸೇವಾ ಪ್ರತಿನಿಧಿ ಯೋಗಾನಂದ, ಕೇಂದ್ರದ ಸದಸ್ಯರು ಒಕ್ಕೂಟ ಪದಾಧಿಕಾರಿಗಳು ಹಾಗು ಸದಸ್ಯರು ಮತ್ತು ಗ್ರಾಮಸ್ಥರು ಇದ್ದರು.