ಮೈಸೂರು: ಕರ್ನಾಟಕದ ದಕ್ಷಿಣ ಭಾಗದ ಜಿಲ್ಲೆಗಳ ಜನರ ಜೀವನಾಡಿ ಕಾವೇರಿ ನೀರನ್ನು ರಾಜ್ಯದಲ್ಲಿ ತೀವ್ರ ಬರಗಾಲದ ಮಧ್ಯೆ ತಮಿಳು ನಾಡಿಗೆ ಹರಿಸುವುದನ್ನು ವಿರೋಧಿಸಿ ಇಂದು ಶುಕ್ರವಾರ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರುನಾಡು ಬಂದ್ ಗೆ ಬೆಳಗ್ಗೆಯಿಂದಲೇ ಪ್ರತಿಕ್ರಿಯೆ ಜೋರಾಗಿದೆ.
ಕಾವೇರಿಗಾಗಿ ಕರ್ನಾಟಕ ಬಂದ್ ಹಿನ್ನೆಲೆ ಮೈಸೂರಿನ ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದ ಬಳಿ ಪತ್ರಕರ್ತರು ಮೌನ ಪ್ರತಿಭಟನೆ ನಡೆಸಲಾಗಿದೆ.
ಮೈಸೂರು ಪತ್ರಕರ್ತರು ಕರ್ತವ್ಯದ ನಡುವೆ ಮೌನ ಪ್ರತಿಭಟನೆ ಮಾಡಿ, ಕಾವೇರಿ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.