Sunday, April 20, 2025
Google search engine

Homeರಾಜ್ಯಸುದ್ದಿಜಾಲಕರ್ನಾಟಕ ಬಂದ್: ಬೆಳಗಾವಿಯಲ್ಲಿ ತಟ್ಟದ ಬಂದ್ ಬಿಸಿ

ಕರ್ನಾಟಕ ಬಂದ್: ಬೆಳಗಾವಿಯಲ್ಲಿ ತಟ್ಟದ ಬಂದ್ ಬಿಸಿ

ಬೆಳಗಾವಿ: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ವಿರೋಧಿಸಿ ಇಂದು ಕೆಲ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಕರವೇ ಶಿವರಾಮೇಗೌಡ ಬಣದಿಂದ ಕೂಡ ಬೆಳ್ಳಂಬೆಳಗ್ಗೆ ಪ್ರತಿಭಟನೆ ನಡೆಸಲಾಯಿತು.ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಕರವೇ ಜಿಲ್ಲಾಧ್ಯಕ್ಷ ವಾಜೀದ ಹಿರೇಕೂಡಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ತಮಿಳುನಾಡಿಗೆ ನೀರು ಬಿಡುವುದನ್ನು ವಿರೋಧಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು.

ನಮ್ಮದು ನಮ್ಮದು ಕಾವೇರಿ ನಮ್ಮದು ಎಂದು ಘೋಷಣೆ ಕೂಗಿದ ಕರವೇ ಕಾರ್ಯಕರ್ತರ ಪ್ರತಿಭಟನೆಗೆ ರೈತ ಸಂಘಟನೆಗಳೂ ಕೂಡ ಸಾಥ್ ಕೊಟ್ಟವು. ಪ್ರತಿಭಟನೆ ಹೆಚ್ಚಾಗುತ್ತಿದ್ದಂತೆ ಹೋರಾಟಗಾರರನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾದರು. ಈ ವೇಳೆ ತೀವ್ರ ವಿರೋಧ ವ್ಯಕ್ತಪಡಿಸಿದ ಪ್ರತಿಭಟನಾಕಾರರು ರಸ್ತೆ ಮೇಲೆ ಉರುಳಾಡಿದರು. ಬಳಿಕ ಅವರನ್ನು ಪೊಲೀಸ್ ವಾಹನದಲ್ಲಿ ಕರೆದೊಯ್ಯಲಾಯಿತು. ಜಿಲ್ಲೆಯಲ್ಲಿ ಬಂದ್ ಬಿಸಿ ಯಾವುದೇ ರೀತಿ ತಟ್ಟಿಲ್ಲ.

ಕೆಎಸ್‌ಆರ್ಟಿಸಿ ಬಸ್, ಖಾಸಗಿ ವಾಹನಗಳ ಓಡಾಟ ಎಂದಿನಂತಿದ್ದು, ಶಾಲಾ ಕಾಲೇಜುಗಳಿಗೂ ರಜೆ ನೀಡಲಾಗಿಲ್ಲ. ಹೋಟೆಲ್, ಅಂಗಡಿ ಮುಂಗಟ್ಟುಗಳು ಕಾರ್ಯನಿರ್ವಹಿಸುತ್ತಿವೆ. ಬೆಳಗ್ಗೆ ಪ್ರತಿಭಟನೆಯಿಂದಾಗಿ ಬಸ್ ಸಂಚಾರ ಸ್ಥಗಿತವಾಗಿ, ಕೆಲ ಕಾಲ ಪ್ರಯಾಣಿಕರು ಪರದಾಡಿದರು. ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಬಳಿಕ ಸುಗಮ ಬಸ್ ಸಂಚಾರ ಆರಂಭವಾಯಿತು. ಅಲ್ಲದೇ ಅಂಗಡಿ ಮುಂಗಟ್ಟು ಓಪನ್ ಇದ್ದು, ಜನರ ಓಡಾಟ ಎಂದಿನಂತೆ ಸಹಜವಾಗಿದೆ.

RELATED ARTICLES
- Advertisment -
Google search engine

Most Popular