ಬಳ್ಳಾರಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ರೈತಪರ ಸಂಘಟನೆಗಳು, ವಿವಿಧ ಕನ್ನಡಪರ ಹೋರಾಟಗಾರರು ಇಂದು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದಾರೆ. ಈಗಾಗಲೇ ಬೆಂಗಳೂರು ಸೇರಿ ರಾಜ್ಯದ ಹಲವು ಭಾಗಗಳಲ್ಲಿ ಬಂದ್‌ಗೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ಬಳ್ಳಾರಿಯಲ್ಲಿ ಬಂದ್‌ಗೆ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ.
ಜಿಲ್ಲೆಯಲ್ಲಿ ಎಂದಿನಂತೆ ಅಂಗಡಿ ಮುಂಗಟ್ಟು ತೆರೆದಿದ್ದು, ಆಟೋ, ಬಸ್ ಸಂಚಾರ ಲಭ್ಯವಿದೆ. ಕಾವೇರಿ ವಿಚಾರವಾಗಿ ಸಾಂಕೇತಿಕವಾಗಿ ಪ್ರತಿಭಟನೆ ಮಾಡೋದಾಗಿ ಇಲ್ಲಿನ ಕನ್ನಡ ಪರ ಸಂಘಟನೆಗಳು ಹೇಳಿವೆ. ಇನ್ನೊಂದೆಡೆ ಈ ಹೋರಾಟದಲ್ಲಿ ಭಾಗಿಯಾಗಲ್ಲ ಎಂದು ಜಿಲ್ಲೆಯ ರೈತರು ಸ್ಪಷ್ಟವಾಗಿ ಹೇಳಿದ್ದಾರೆ. ರಾಷ್ಟ್ರೀಯ ಹೆದ್ದಾರಿ ೬೩ರಲ್ಲಿ ಕರವೇ ಕಾರ್ಯಕರ್ತರು ಟೈರ್ ಸುಟ್ಟು ಪ್ರತಿಭಟನೆ ನಡೆಸಿದರು. ಹೊಸಪೇಟೆಗೆ ಹೋಗುವ ರಸ್ತೆಯಲ್ಲಿ ಟೈರ್ ಸುಡಲು ಮುಂದಾದ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದಾರೆ. ಬಳಿಕ ರಾಜ್ಯ ಸರ್ಕಾರ, ಕಾವೇರಿ ನಿರ್ವಾಹಣಾ ಮಂಡಳಿ ವಿರುದ್ಧ ಘೋಷಣೆ ಕೂಗಿದರು. ಕೇವಲ ಬೆರಳಣಿಕೆಯ ಜನ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.