ಮಂಡ್ಯ: ಮತ್ತೆ ತಮಿಳುನಾಡಿಗೆ ಕಾವೇರಿ ನೀರು CWRC ಸೂಚನೆ ಹಿನ್ನೆಲೆ ಮಂಡ್ಯದಲ್ಲಿ ಕಾವೇರಿ ಕಿಚ್ಚು ಮುಂದುವರಿದಿದ್ದು, ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯಿಂದ ವಿನೂತನ ಪ್ರತಿಭಟನೆ ನಡೆಸಲಾಗಿದೆ.
ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ತೆಂಗಿನಚಿಪ್ಪು ಹಿಡಿದು, ಕಿವಿಗೆ ಹೂವು ಇಟ್ಟುಕೊಂಡು ಪ್ರತಿಭಟನೆ ನಡೆಸಲಾಗಿದೆ.
ರಾಜ್ಯ ಸರ್ಕಾರ ರೈತರ ಕಿವಿ ಹೂವು ಇಟ್ಟಿದೆ, ಕೈ ಚಿಪ್ಪು ಕೊಟ್ಟಿದೆ. ರೈತರ ಬದುಕನ್ನು ಬೀದಿಗೆ ರಾಜ್ಯ ಸರ್ಕಾರ ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿ, ತಕ್ಷಣವೇ ತಮಿಳುನಾಡಿಗೆ ನೀರು ನಿಲ್ಲಿಸುವಂತೆ ಆಗ್ರಹಿಸಿದ್ದಾರೆ.
ಪ್ರತಿಭಟನೆಯಲ್ಲಿ ಮಾಜಿ ಸಚಿವ ಸಿಎಸ್ ಪುಟ್ಟರಾಜು, ಮಾಜಿ ಶಾಸಕ ಜಿಬಿ ಶಿವಕುಮಾರ್, ಸೇರಿ ಹಲವರು ಭಾಗಿಯಾಗಿದ್ದರು.