ಹ್ಯಾಂಗ್‌ಝೌ(ಚೀನಾ): ಕಳೆದ ಆರು ದಿನಗಳಲ್ಲಿ ಭಾರತದ ಆಟಗಾರರು ಅದ್ಭುತ ಪ್ರದರ್ಶನ ನೀಡಿದ್ದಾರೆ. ಇಂದಿಗೂ ಹಲವು ಕ್ರೀಡೆಗಳಲ್ಲಿ ಪದಕಗಳ ನಿರೀಕ್ಷೆ ಇದೆ. ಏಷ್ಯನ್ ಗೇಮ್ಸ್‌ನ ಏಳನೇ ದಿನ ಪದಕ ಪಟ್ಟಿಯಲ್ಲಿ ಭಾರತದ ಚಿನ್ನದ ಖಾತೆ ತೆರೆದಿದೆ. ರುತುಜಾ ಭೋಸಲೆ ಮತ್ತು ರೋಹನ್ ಬೋಪಣ್ಣ ಜೋಡಿ ಮಿಶ್ರ ಡಬಲ್ಸ್ ಟೆನಿಸ್ ಸ್ಪರ್ಧೆಯಲ್ಲಿ ಚಿನ್ನ ಜಯಿಸಿದ್ದಾರೆ.
ರುತುಜಾ ಭೋಸಲೆ ಮತ್ತು ರೋಹನ್ ಬೋಪಣ್ಣ ಜೋಡಿ ಮಿಶ್ರ ಡಬಲ್ಸ್ ಟೆನಿಸ್ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನದ ಪದಕವನ್ನು ಗೆದ್ದುಕೊಟ್ಟಿದೆ. ಚೈನೀಸ್ ತೈಪೆಯ ಅನ್-ಶೌ ಲಿಯಾಂಗ್ ಮತ್ತು ತ್ಸುಂಗ್ ಹಾವ್ ಹುವಾಂಗ್ ಜೋಡಿಯನ್ನು ಮೂರನೇ ಸೆಟ್‌ನಲ್ಲಿ ಟೈ ಬ್ರೇಕರ್‌ನಲ್ಲಿ ಬೋಸಲೆ ಮತ್ತು ಬೋಪಣ್ಣ ಜೋಡಿ ಸೋಲಿಸಿತು. ೪೩ರ ಹರೆಯದ ರೋಹನ್ ಬೋಪಣ್ಣ ದೇಶದ ನಿರೀಕ್ಷೆಗೆ ತಕ್ಕಂತೆ ಆಟವಾಡಿದರು. ಇದರೊಂದಿಗೆ ಭಾರತ ೨೦೦೨ ರಿಂದ ಟೆನಿಸ್‌ನಲ್ಲಿ ಚಿನ್ನದ ಪದಕಗಳ ಸರಣಿಯನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ.