Sunday, April 20, 2025
Google search engine

Homeರಾಜ್ಯಸುದ್ದಿಜಾಲಅ.೧೬ ರಿಂದ ಸಾಂಪ್ರದಾಯಿಕ ಶ್ರೀರಂಗಪಟ್ಟಣ ದಸರಾ ಆಚರಣೆ: ರಮೇಶ್ ಬಾಬು ಬಂಡಿಸಿದ್ದೇಗೌಡ

ಅ.೧೬ ರಿಂದ ಸಾಂಪ್ರದಾಯಿಕ ಶ್ರೀರಂಗಪಟ್ಟಣ ದಸರಾ ಆಚರಣೆ: ರಮೇಶ್ ಬಾಬು ಬಂಡಿಸಿದ್ದೇಗೌಡ

ಮಂಡ್ಯ: ಜಿಲ್ಲಾಡಳಿತದ ವತಿಯಿಂದ ಶ್ರೀರಂಗಪಟ್ಟಣ ದಸರಾ ಮಹೋತ್ಸವವನ್ನು ಅಕ್ಟೋಬರ್ ೧೬,೧೭,೧೮ ರಂದು ಮೂರು ದಿನಗಳ ಕಾಲ ಸಾಂಪ್ರದಾಯಿಕ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಶಾಸಕರಾದ ರಮೇಶ್ ಬಾಬು ಬಂಡಿಸಿದ್ದೇಗೌಡ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ನಮ್ಮ ನಾಡಿನ ಕಲೆ, ಸಂಸ್ಕೃತಿ, ಪರಂಪರೆಯನ್ನು ಸಾರುವ ದಸರಾ ಮಹೋತ್ಸವವನ್ನು ಜನರ ಉತ್ಸವವನ್ನಾಗಿ ಅಚ್ಚುಕಟ್ಟಾಗಿ ನೆರವೇರಿಸಬೇಕು. ಎಲ್ಲಾ ಉಪಸಮಿತಿಗಳು ಸಮನ್ವಯ ಸಾಧಿಸಿ ಅತ್ಯುತ್ತಮವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮುಖೇನ ದಸರಾ ಮಹೋತ್ಸವವನ್ನು ಯಶಸ್ವಿಯಾಗಿಸಬೇಕು ಎಂದು ತಿಳಿಸಿದರು.

ದಸರಾ ಮಹೋತ್ಸವವನ್ನು ಅಚ್ಚುಕಟ್ಟಾಗಿ, ಪಾರಂಪರಿಕವಾಗಿ, ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಮೂರು ದಿನಗಳ ಕಾರ್ಯಕ್ರಮಗಳ ರೂಪರೇಷೆಗಳನ್ನು ಸಿದ್ಥಪಡಿಸಬೇಕು. ಅಧಿಕಾರಿಗಳು ತಮಗೆ ವಹಿಸಿರುವ ಜವಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿ. ಜೊತೆಗೆ ಪೂರ್ವಭಾವಿಯಾಗಿ ಸಿದ್ಧತೆಗಳನ್ನು ಮಾಡಿಕೊಂಡು ಕಾರ್ಯಕ್ರಮಗಳನ್ನು ಆಯೋಜನೆ ಮಾಡಬೇಕು. ಜಿಲ್ಲೆಯ ಸಂಸ್ಕೃತಿಯ ಬಗ್ಗೆ ಹೆಚ್ಚಿನ ಕಾರ್ಯಕ್ರಮ ಆಯೋಜಿಸಿ ಎಂದರು.

ಜಿಲ್ಲಾಧಿಕಾರಿ ಡಾ.ಕುಮಾರ ಅವರು ಮಾತನಾಡಿ ದಸರಾ ಮಹೋತ್ಸವ ಆಯೋಜನೆಗೆ ಸಂಬಂಧಿಸಿದಂತೆ ಜಿಲ್ಲೆಯ ವಿಧಾನಸಭಾ ಹಾಗೂ ವಿಧಾನಪರಿಷತ್ ಶಾಸಕರನ್ನೊಳಗೊಂಡ ಸಂಪೂರ್ಣ ದಸರಾ ಆಚರಣಾ ಸಮಿತಿ, ವೇದಿಕೆ ಸಮಿತಿ, ಸಾಂಸ್ಕೃತಿಕ ಸಮಿತಿ, ಮೆರವಣಿಗೆ, ವಸ್ತು ಪ್ರದರ್ಶನ, ಆರೋಗ್ಯ, ನಗರ ಅಲಂಕಾರ, ಕ್ರೀಡಾ, ಆಹಾರ ಹಾಗೂ ಹಣಕಾಸು ಸಮಿತಿ ರಚಿಸಲಾಗಿದೆ. ಎಲ್ಲಾ ಸಮಿತಿಯ ಸದಸ್ಯರು ಸಮನ್ವಯ ಸಾಧಿಸಿ ದಸರಾ ಮಹೋತ್ಸವ ಯಶಸ್ವಿಗೊಳಿಸಿ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗರಾಜು, ಪಾಂಡವಪುರ ಉಪ ವಿಭಾಗಾಧಿಕಾರಿ ನಂದೀಶ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್, ಶ್ರೀರಂಗಪಟ್ಟಣ ತಹಶೀಲ್ದಾರ್ ಶ್ವೇತ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಎಂ.ಕೃಷ್ಣಕುಮಾರ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.

RELATED ARTICLES
- Advertisment -
Google search engine

Most Popular