ಪಿರಿಯಾಪಟ್ಟಣ: ತಾಲೂಕು ಶ್ರೀ ವಿಶ್ವಕರ್ಮ ಸೇವಾ ಸಮಾಜ ವತಿಯಿಂದ ಅ.1 ರಂದು ಎರಡನೇ ವರ್ಷದ ತಾಲೂಕು ಮಟ್ಟದ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದೆ ಎಂದು ತಾಲೂಕು ವಿಶ್ವಕರ್ಮ ಸಮಾಜ ಅಧ್ಯಕ್ಷ ಮಹೇಶ್ ಆಚಾರ್ಯ ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 8.30 ಗಂಟೆಗೆ ಪಟ್ಟಣದ ಒಳಕೋಟೆ ಶ್ರೀ ವಿನಾಯಕ ಕಾಳಿಕಾಂಬ ಕಮಟೇಶ್ವರ ದೇವಾಲಯದಿಂದ ಮೆರವಣಿಗೆ ಹೊರಟು ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಮಧ್ಯಾಹ್ನ 12 ಗಂಟೆಗೆ ಧಾರ್ಮಿಕ ಸಭೆ ನಡೆಯಲಿದೆ.
ಅರಕಲಗೂಡು ತಾಲೂಕು ಅರೆಮಾದನಹಳ್ಳಿಯ ವಿಶ್ವಕರ್ಮ ಜಗದ್ಗುರು ಪೀಠದ ವಿಶ್ವ ಬ್ರಾಹ್ಮಣ ಮಹಾ ಸಂಸ್ಥಾನದ ಶ್ರೀ ಶಿವಸುಜ್ಞಾನ ತೀರ್ಥ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಲಿದ್ದು, ಪಶು ಸಂಗೋಪನೆ ಹಾಗೂ ರೇಷ್ಮೆ ಸಚಿವರಾದ ಕೆ.ವೆಂಕಟೇಶ್ ಕಾರ್ಯಕ್ರಮ ಉದ್ಘಾಟದಲ್ಲಿದ್ದಾರೆ.

ಸಂಸದ ಪ್ರತಾಪ್ ಸಿಂಹ ಅವರು ವಿಶ್ವಕರ್ಮ ಸ್ವಾಮಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಿದ್ದು, ಮೆರವಣಿಗೆಗೆ ಮಾಜಿ ಶಾಸಕ ಕೆ.ಮಹದೇವ್ ಚಾಲನೆ ನೀಡಲಿದ್ದಾರೆ, ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ ವಿಜಯ್ ಕುಮಾರ್, ಮೈಮುಲ್ ಅಧ್ಯಕ್ಷ ಪಿ.ಎಂ ಪ್ರಸನ್ನ, ಪುರಸಭೆ ಆಶ್ರಯ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಬಿಜೆಪಿ ಮುಖಂಡ ಕೌಲನಹಳ್ಳಿ ಸೋಮಶೇಖರ್ ಸೇರಿದಂತೆ ಜಿಲ್ಲೆಯ ವಿವಿಧೆಡೆಯ ತಾಲೂಕು ವಿಶ್ವಕರ್ಮ ಸಮಾಜ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗವಹಿಸಲಿದ್ದು ಕಾರ್ಯಕ್ರಮಕ್ಕೆ ತಾಲೂಕು ವಿಶ್ವಕರ್ಮ ಸಮಾಜದವರು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಿದ್ದಾರೆ.