ಧಾರವಾಡ : ಸ್ವಚ್ಛತಾ ಹಿ ಸೇವಾ ಅಭಿಯಾನದಡಿ ಅ. 1 ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಛೇರಿ ಆವರಣದ ಸ್ವಚ್ಛತಾ ಕಾರ್ಯಕ್ರಮವನ್ನು ಪಾಟೀಲ್ ಶಶಿ ನೇತೃತ್ವದಲ್ಲಿ ಆಯೋಜಿಸಲಾಗಿತ್ತು .
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಮಿಕರೊಂದಿಗೆ ಆವರಣವನ್ನು ಸ್ವಚ್ಛಗೊಳಿಸಲು ಕ್ರಮ ಕೈಗೊಂಡರು. ಸ್ವಚ್ಛತಾ ಅಭಿಯಾನದಲ್ಲಿ ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಸುಜಾತಾ ಹಾಸವಿಮಠ ಎಫ್‌ಡಬ್ಲ್ಯುಒ ಅಧಿಕಾರಿ ಡಾ.ಮಹೇಶ ಚಿತ್ತರಗಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಕಲಾಸೂರಮಠ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಮಂಜುನಾಥ ಸೊಪ್ಪಿಮಠ ಸೇರಿದಂತೆ ಎಲ್ಲ ಸಿಬ್ಬಂದಿ ಭಾಗವಹಿಸಿದ್ದರು.