ಶಿವಮೊಗ್ಗ : ಮಹಾತ್ಮಾ ಗಾಂಧೀಜಿ ಅವರು ಅಹಿಂಸೆಯ ತತ್ವವನ್ನು ಅಳವಡಿಸಿಕೊಂಡ ಮಹಾನ್ ದಾರ್ಶನಿಕರು. ಅವರ ಈ ತತ್ವವನ್ನು ನಾವೆಲ್ಲರೂ ಅಳವಡಿಸಿಕೊಂಡು ಇತರರಿಗೂ ಕಲಿಸೋಣ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಶಿವಮೊಗ್ಗ ಇವರು ಇಂದು ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಮಹಾತ್ಮ ಗಾಂಧೀಜಿಯವರ ೧೫೪ನೇ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ರಾಷ್ಟ್ರಪಿತ ಗಾಂಧೀಜಿ ಕೇವಲ ಸ್ವಾತಂತ್ರ್ಯ ಹೋರಾಟಗಾರರಲ್ಲ. ಸತ್ಯ, ಅಹಿಂಸೆ, ಸಮಾನತೆಯನ್ನು ತೋರಿಸಿಕೊಟ್ಟ ದಾರ್ಶನಿಕರು ಸನ್ಮಾರ್ಗದಲ್ಲಿ ಸಾಗಬೇಕು. ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ಬ್ರಿಟಿಷರು ಗುಂಡುಗಳಿಗಿಂತ ಗಾಂಧೀಜಿಯವರ ಅಹಿಂಸೆ ತತ್ವಕ್ಕೆ ಹೆದರುತ್ತಿದ್ದರು. ವಿನ್ಸೆಂಟ್ ಚರ್ಚಿಲ್ ಅವರು ಗಾಂಧೀಜಿಯವರ ಬಗ್ಗೆ ಹೇಳಿದ್ದನ್ನು ಎಲ್ಲಾ ವಿದ್ಯಾರ್ಥಿಗಳು ಓದಬೇಕು.
ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಸರ್ವಧರ್ಮ ಪ್ರಾರ್ಥನೆ ನಡೆಯಿತು. ಶ್ರೀ ಮಂಜುನಾಥ ಭಟ್ ಅವರಿಂದ ಭಗವದ್ಗೀತೆ, ಶ್ರೀ ಲತೀಫ್ ಸಾ ಅಡಿ, ಕುರಾನ್ ಮತ್ತು ಫಾ. ಸ್ಟ್ಯಾನಿ ಡಿಸೋಜಾ ಬೈಬಲ್ ವಾಚನ ಮಾಡಿದರು.
ಮಹಾತ್ಮಗಾಂಧಿ ಜಯಂತಿ ನಿಮಿತ್ತ ಪ್ರೌಢಶಾಲಾ, ಪದವಿ ಹಾಗೂ ಪದವಿ/ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಯಿತು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ (ಪ್ರೊ) ಮಾರುತಿ ಆರ್ ಕಾರ್ಯಕ್ರಮವನ್ನು ಸ್ವಾಗತಿಸಿದರು. ಅಲ್ಪಸಂಖ್ಯಾತರ ಇಲಾಖೆಯ ತಾಲೂಕು ವಿಸ್ತರಣಾಧಿಕಾರಿ ಶ್ರೀಪತಿ ಮಂಡಿಸಿದರು. ಪಂಚಾಯಿತಿ ಉಪ ಕಾರ್ಯದರ್ಶಿ ಜಿ.ಸುಜಾತಾ ಕೆ. ಆರ್, ಡಿಡಿಪಿಯು ಕೃಷ್ಣಪ್ಪ, ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.