Sunday, April 20, 2025
Google search engine

Homeರಾಜ್ಯಸುದ್ದಿಜಾಲಗಾಂಧಿ ಕನಸು ಸ್ವಚ್ಚ ಭಾರತ, ಅನುಷ್ಠಾನ ಮಾಡುವುದು ನಮ್ಮೆಲ್ಲ ಜವಾಬ್ದಾರಿ: ಶಾಸಕರ ಕೆ.ಎಸ್.ಬಸವಂತಪ್ಪ

ಗಾಂಧಿ ಕನಸು ಸ್ವಚ್ಚ ಭಾರತ, ಅನುಷ್ಠಾನ ಮಾಡುವುದು ನಮ್ಮೆಲ್ಲ ಜವಾಬ್ದಾರಿ: ಶಾಸಕರ ಕೆ.ಎಸ್.ಬಸವಂತಪ್ಪ

ದಾವಣಗೆರೆ: ಗಾಂಧೀಜಿಯವರ ಕನಸು ಸ್ವಚ್ಚ ಭಾರತವಾಗಿದ್ದು ಪ್ರಾಮಾಣಿಕವಾಗಿ ಇದನ್ನು ಅನುಷ್ಠಾನ ಮಾಡಬೇಕಾಗಿರುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಮಾಯಕೊಂಡ ಶಾಸಕರ ಕೆ.ಎಸ್.ಬಸವಂತಪ್ಪ ತಿಳಿಸಿದರು.

ಅವರು ಸೋಮವಾರ ಗಾಂಧಿ ಭವನದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾದ ಮಹಾತ್ಮ ಗಾಂಧಿ 154 ನೇ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಯಾವ ರೀತಿ ದಿನನಿತ್ಯ ನಗರದ ಸ್ವಚ್ಚತೆಯನ್ನು ಕೈಗೊಳ್ಳಲಾಗುತ್ತದೆ, ಅದೇ ಮಾದರಿಯಲ್ಲಿ ಗ್ರಾಮಾಂತರ ಪ್ರದೇಶ ಪಂಚಾಯಿತಿ ಮಟ್ಟದಲ್ಲಿ ನಡೆಯುವಂತಾಗಬೇಕು. ಗಾಂಧಿಜಿಯವರು ದೇಶದ ರಾಷ್ಟ್ರಪಿತ ಇವರನ್ನು ಮಹಾತ್ಮ ಎಂದೇ ಕರೆಯಲಾಗುತ್ತದೆ. ಎಲ್ಲರೂ ಮಹಾತ್ಮರಾಗಲು ಸಾಧ್ಯವಿಲ್ಲ, ಗಾಂಧಿಯನ್ನು ಮಾತ್ರ ಈ ಸ್ಥಾನದಲ್ಲಿ ನೋಡಲು ಸಾಧ್ಯ ಎಂದ ಅವರು ಲಾಲ್ ಬಹದ್ದೂರ್ ಶಾಸ್ತ್ರಿಯವರು ಗೃಹ, ರೈಲ್ವೆ ಸಚಿವರಾಗಿ ನಂತರ ದೇಶದ ಎರಡನೇ ಪ್ರಧಾನಿಯಾಗಿ ದಕ್ಷ, ಪ್ರಾಮಾಣಿಕತೆಯಿಂದ ಆಡಳಿತ ನಡೆಸಿದರು, ಅವರ ಸೇವೆಯು ಸ್ಮರಣೀಯವಾದುದು ಎಂದರು.

ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ. ಅವರು ಗಾಂಧಿ ಮತ್ತು ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಚರಕದಲ್ಲಿ ನೂಲುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ದೇಶಕ್ಕೆ ತಮ್ಮ ಬದುಕನ್ನೆ ಮುಡುಪಾಗಿಟ್ಟವರು ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರಾಗಿದು,ಸರ್ವಧರ್ಮ ಸಮಾನತೆ ಸಂದೇಶವನ್ನು ದೇಶಕ್ಕೆ ನೀಡಿದ್ದಾರೆ. ಗಾಂಧಿ ಕೇವಲ ಭಾರತಕ್ಕಲ್ಲಾ ವಿಶ್ವ ಕಂಡ ಶಾಂತಿ ಧೂತರಾಗಿದ್ದರು. ಅವರ ಸತ್ಯ, ಶಾಂತಿ, ಅಹಿಂಸಾ ಮಾರ್ಗ ಜಗತ್ತಿಗೆ ಮಾದರಿಯಾದದು. ಇವರನ್ನು ಮಹಾಪುರುಷ ಮತ್ತು ಯುಗ ಪುರುಷನೆಂದೇ ಕರೆಯಲಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಮಹಾನಗರಪಾಲಿಕೆ ಮೇಯರ್ ವಿನಾಯಕ್ ಪೈಲ್ವನ್, ಜಿ.ಪಂ. ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್, ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್, ಪಾಲಿಕೆಯ ಆರೋಗ್ಯ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷರಾದ ಮೀನಾಕ್ಷಿ ಜಗದೀಶ್, ಪಾಲಿಕೆ ಸದ್ಯಸರಾದ ಹೆಚ್.ನಾಗರಾಜ್, ಪಾಮೇನಹಳ್ಳಿ ನಾಗರಾಜ್, ಉಪಸ್ಥಿತರಿದ್ದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಧನಂಜಯ ಸ್ವಾಗತಿಸಿದರು. ಪೊಲೀಸ್ ಇಲಾಖೆ ದೇವರಾಜ್ ಮತ್ತು ಶೈಲಜ ನಿರೂಪಿಸಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ವಂದಿಸಿದರು.

RELATED ARTICLES
- Advertisment -
Google search engine

Most Popular