ಮೈಸೂರು: ಮೈಸೂರಿನ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ರಿಂಗ್ ರಸ್ತೆಯನ್ನು ಇಂದು ಮೂಕಾಂಬಿಕಾ ಸಮೃದ್ದಿ ಬಡಾವಣೆ ನಿವಾಸಿಗಳ ಹಿತರಕ್ಷಣ ಸಮಿತಿ(ರಿ), ಶ್ರೀರಾಂಪುರ ಪಟ್ಟಣ ಪಂಚಾಯಿತಿ, ವಿಶ್ವವಿದ್ಯಾನಿಲಯ ಬಡಾವಣೆ ನಿವಾಸಿಗಳ ಸಂಘ, ಕ್ರೈಸ್ಟ್ ಕಾಲೇಜು ವಿದ್ಯಾರ್ಥಿಗಳು ಸೇರಿ 4 ಕಿಮಿ ರಿಂಗ್ ರಸ್ತೆಯನ್ನು ಸ್ವಚ್ಛ ಮಾಡುವ ಮೂಲಕ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀರಾಂಪುರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶ್ರೀಧರ್, ಆರೋಗ್ಯಾಧಿಕಾರಿ ಪರಮೇಶ್ವರ್, ಸಮುದಾಯ ಅಧಿಕಾರಿ ಶ್ರೀನಿವಾಸ್, ಕಂದಾಯ ಅಧಿಕಾರಿ ಕುಮಾರ್, ಮೂಕಾಂಬಿಕಾ ಸಮೃದ್ದಿ ಬಡಾವಣೆಯ ನಿವಾಸಿಗಳ ಹಿತರಕ್ಷಣ ಸಮಿತಿ ಅಧ್ಯಕ್ಷ ಕೆ.ಆರ್.ಗಣೇಶ್, ಉಪಾಧ್ಯಕ್ಷ ರಾಮಕೃಷ್ಣ, ಪುನೀತ್, ರಾಮಕೃಷ್ಣ, ಪಾರ್ಶ್ವನಾಥ್ ಹಾಗೂ ಮೂಕಾಂಬಿಕಾ ಸಮೃದ್ದಿ ಬಡಾವಣೆಯ ನಿವಾಸಿಗಳು, ಕ್ರೈಸ್ಟ್ ಕಾಲೇಜು ವ್ಯವಸ್ಥಾಪಕ ಮಂಡಳಿ, ದೈಹಿಕ ಶಿಕ್ಷಕರು, ಪರಿಸರ ಬಳಗ, NSS ವಿದ್ಯಾರ್ಥಿಗಳು, ವಿಶ್ವವಿದ್ಯಾನಿಲಯ ಬಡಾವಣೆಯ ನಾಣಯ್ಯ ಹಾಗೂ ನಿವಾಸಿಗಳು ಹಾಜರಿದ್ದರು.