Sunday, April 20, 2025
Google search engine

Homeರಾಜಕೀಯಶಿವಮೊಗ್ಗ ಗಲಾಟೆ ವೇಳೆ ಹಿಂದೂ ಧರ್ಮೀಯರ ಅಂಗಡಿಗಳ ಲೂಟಿ, ಮನೆಗಳಿಗೆ ದಾಳಿ ನಡೆಸಿರುವುದು ಖಂಡನೀಯ: ನಳಿನ್...

ಶಿವಮೊಗ್ಗ ಗಲಾಟೆ ವೇಳೆ ಹಿಂದೂ ಧರ್ಮೀಯರ ಅಂಗಡಿಗಳ ಲೂಟಿ, ಮನೆಗಳಿಗೆ ದಾಳಿ ನಡೆಸಿರುವುದು ಖಂಡನೀಯ: ನಳಿನ್ ಕುಮಾರ್ ಕಟೀಲು

ಮಂಗಳೂರು(ದಕ್ಷಿಣ ಕನ್ನಡ): ಶಿವಮೊಗ್ಗದಲ್ಲಿ ಮೀಲಾದುನ್ನಬಿ ಮೆರವಣಿಗೆಯ ವೇಳೆ ನಡೆದ ಘಟನೆ ಹಿಂದೆ ಮತಾಂಧ ಶಕ್ತಿಗಳ ಕೈವಾಡ ಕಂಡು ಬರುತ್ತಿದೆ. ಮಿಲಾದ್ ಮೆರವಣಿಗೆ ಹೆಸರಿನಲ್ಲಿ ಹಿಂದೂ ಧರ್ಮೀಯರ ಅಂಗಡಿಗಳ ಲೂಟಿ, ಮನೆಗಳಿಗೆ ದಾಳಿ ನಡೆಸಿದ್ದು ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.

ಅವರು ಇಂದು ಮಂಗಳೂರಿನಲ್ಲಿ ಮಾಧ್ಯಮದವ್ರ ಜತೆ ಮಾತನಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಕಾಂಗ್ರೆಸ್ ನ ವಿಜಯೋತ್ಸವದ ಮೆರವಣಿಗೆಯಲ್ಲಿ ಪಾಕಿಸ್ತಾನದ ಧ್ವಜ ಹಾರಾಡಿದ್ದು, ಪಾಕಿಸ್ತಾನದ ಪರ ಘೋಷಣೆ ಕೂಗಲಾಗಿತ್ತು. ಆ ಸಂದರ್ಭ ಯಾವುದೇ ರೀತಿಯ ಕಠಿಣ ಕ್ರಮ ಕೈಗೊಳ್ಳದಿರುವ ಕಾರಣ ಮತಾಂಧ ಶಕ್ತಿಗಳು ಮತ್ತೆ ತಮ್ಮ ಎದ್ದು ನಿಂತಿವೆ ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಗೃಹ ಸಚಿವರು ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾಗಿದ್ದಾರೆ. ಮುಖ್ಯಮಂತ್ರಿ ಮತ ಬೇಟೆಗಾಗಿ ಇಂತಹ ಭಯೋತ್ಪದನಾ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮಕ್ಕೆ ವಿಫಲರಾಗಿದ್ದಾರೆ.

ಹಿಂದೆ ಪ್ರವೀಣ್ ನೆಟ್ಟಾರು, ಹರ್ಷ ಹತ್ಯೆ ಎನ್ ಐಎ ತನಿಖೆ ಮೂಲಕ ಕಠಿಣ ಕ್ರಮ ವಹಿಸಲಾಗಿತ್ತು. ಡಿಜೆ ಹಳ್ಳಿ, ಕೆಜೆ ಹಳ್ಳಿ, ಹುಬ್ಬಳ್ಳಿ ಗಲಾಟೆ ಸಂದರ್ಭದಲ್ಲಿ ಬಿಜೆಪಿ ಸರಕಾರ ಕಠಿಣ ಕ್ರಮ ವಹಿಸಿದ್ದ ಕಾರಣ ಇಂತಹ ಆತಂಕವಾದ ಹತೋಟಿಗೆ ಬಂದಿತ್ತು ಎಂದವರು ಹೇಳಿದರು.

RELATED ARTICLES
- Advertisment -
Google search engine

Most Popular