ಮಂಡ್ಯ: ಶಾಸಕ ಗಣಿಗ ರವಿಕುಮಾರ್ ಅಧ್ಯಕ್ಷತೆಯಲ್ಲಿ ಮಂಡ್ಯ ನಗರದ ಸುಗಮ ಸಂಚಾರ ವ್ಯವಸ್ಥೆ ಕುರಿತು ಎಸ್. ಪಿ. ಕಚೇರಿ ಸಭಾಂಗಣದಲ್ಲಿ ಸಭೆ ನಡೆಯಿತು.
ಶಾಸಕ ಗಣಿಗ ರವಿಕುಮಾರ್ ಮಾತನಾಡಿ, ಸಾರ್ವಜನಿಕರಿಗೆ ತೊಂದರೆಯಾಗದಂತೆ ಹಾಗೂ ಯಾವುದೇ ರೀತಿಯ ಟ್ರಾಫಿಕ್ ಜಾಮ್ ಆಗದಂತೆ ಕ್ರಮ ವಹಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಂಡ್ಯ ನಗರದ ಪುಟ್ ಪಾತ್ ಗಳಲ್ಲಿ ವ್ಯಾಪಾರಸ್ಥರಿಗೆ ಅಂಗಡಿ ವ್ಯವಸ್ಥೆ ಮಾಡಿಕೊಡಲಾಗುವುದು ಎಂದರು.
ಜನಸಂದಣಿ ಪ್ರದೇಶದಲ್ಲಿ ಭಾರಿ ವಾಹನಗಳಿಗೆ ನಿಷೇಧ ಹೇರಿ ಪ್ರತ್ಯೇಕ ರಸ್ತೆ ಮಾರ್ಗಕ್ಕೆ ಸೂಚಿಸಿದರು.
ನಗರ ವ್ಯಾಪ್ತಿಯಲ್ಲಿ ಕ್ರೈಂ ರೇಟ್ ಹೆಚ್ಚಾದ ಹಿನ್ನಲೆ ಸಿಸಿ ಕ್ಯಾಮರಾಗಳ ಅಳವಡಿಕೆಗೆ ಸಭೆಯಲ್ಲಿ ನಿರ್ಧರಿಸಲಾಯಿತು.
ಕೆಲವು ಕಡೆ ಸಿಸಿ ಕ್ಯಾಮರಾಗಳ ಅಳವಡಿಕೆ ಮಾಡಲಾಗಿದೆ. ನಗರದಲ್ಲಿ ಮತಷ್ಟು ಸಿಸಿ ಕ್ಯಾಮರಾಗಳ ಹಾಕಿ ನಿರ್ವಹಣೆ ಮಾಡಲಾಗುವುದು. ಸಿಸಿ ಕ್ಯಾಮರಾಗಳ ಮೂಲಕ ಅಹಿತಕರ ಘಟನೆಗಳನ್ನು ಪತ್ತೆ ಹಚ್ಚಲು ಸಹಾಯವಾಗುತ್ತದೆ. ಜೊತೆಗೆ ಕಳ್ಳತನ ನಡೆದರೆ ಆರೋಪಿಗಳ ಪತ್ತೆ ಮಾಡಲು ಉಪಯೋಗವಾಗಲಿದೆ. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಲಿದೆ ಎಂದು ಎಸ್ ಪಿ ಎನ್.ಯತೀಶ್ ಹೇಳಿದರು.
ಸಭೆಯಲ್ಲಿ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದರು.