ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಹಿನ್ನಲೆ ಸಂಜಯ್ ವೃತ್ತದಲ್ಲಿ ಬೆಂ-ಮೈ ಹೆದ್ದಾರಿ ತಡೆದು, ಮಾನವಸರಪಳಿ ನಿರ್ಮಿಸಿ ಗುತ್ತಿಗೆದಾರರು ಪ್ರತಿಭಟನೆ ನಡೆಸಿದರು.
ಮೂಲಕ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದದರು.

ಬೃಹತ್ ಮೆರವಣಿಗೆ ಮೂಲಕ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ನಡೆಯುತ್ತಿರುವ ರೈತ ಹಿತರಕ್ಷಣಾ ಸಮಿತಿ ಧರಣಿಗೆ ಬೆಂಬಲ ಸೂಚಿಸಿದರು.
ಪ್ರತಿಭಟನೆಯಲ್ಲಿ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ ಭಾಗಿಯಾದರು. ಕೆಂಪಣ್ಣಗೆ ರಾಜ್ಯ ಮತ್ತು ಜಿಲ್ಲಾ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಸಾಥ್ ನೀಡಿದರು.
ಇದಕ್ಕೂ ಮುನ್ನ ಮಂಡ್ಯದ ಕಾವೇರಿ ಭವನದಲ್ಲಿರುವ ಕಾವೇರಿ ಮಾತೆಗೆ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ ಪೂಜೆ ಸಲ್ಲಿಸಿದರು.
ಹೆದ್ದಾರಿ ತಡೆಯಿಂದಾಗಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.