ಶ್ರೀರಂಗಪಟ್ಟಣ: ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ರಸ್ತೆಯಲ್ಲಿ ಭಜನೆ ಮಾಡುವ ಮೂಲಕ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಭೂಮಿ ತಾಯಿ ಹೋರಾಟ ಸಮಿತಿ ವತಿಯಿಂದ ರೈತ ಹೋರಾಟಗಾರ ನಂಜುಂಡೇಗೌಡ ನೇತೃತ್ವದಲ್ಲಿ ಈ ವಿನೂತನ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಪಟ್ಟಣದ ಕುವೆಂಪು ವೃತ್ತದಿಂದ ತಾಲೂಕು ಕಚೇರಿವರೆಗೂ ಭಜನೆ ಮಾಡುತ್ತಾ ರೈತರು ಜಾಥಾ ನಡೆಸಿದರು.
ಸರ್ಕಾರ ವಿರುದ್ಧ ಪದಕಟ್ಟಿ ಭಜನೆ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ,ಇನ್ನಾದ್ರು ಕಟ್ಟೆಯಿಂದ ತಮಿಳುನಾಡಿಗೆ ಬಿಡ್ತಿರೋ ನೀರನ್ನು ನಿಲ್ಲಿಸಲು ಆಗ್ರಹಿಸಿದರು.