ಮಂಡ್ಯ: ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನ ವಿರೋಧಿಸಿ ಶಿವಕುಮಾರ್ ಆರಾಧ್ಯ ಎಂಬಾತ ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾನೆ.
ಮಂಡ್ಯ ತಾಲೂಕಿನ ಉಪ್ಪಾರಕನಹಳ್ಳಿ ಗ್ರಾಮದಲ್ಲಿ ಸ್ವತಃ ಭೂಮಿಯೊಳಗೆ ಸಮಾಧಿಯಾಗಿ ವಿನೂತನ ಪ್ರತಿಭಟನೆ ನಡೆಸಿದ್ದಾನೆ.
ತಮಿಳುನಾಡಿಗೆ ನೀರು ಹರಿಸುವ ಮೂಲಕ ರೈತರನ್ನ ಜೀವಂತ ಸಮಾಧಿ ಮಾಡುತ್ತಿದೆ. ಇಷ್ಟು ದಿನ ವಿರೋಧಿ ಘೋಷಣೆ ಕೂಗಿದ್ವಿ. ಇನ್ನು ಅವರ ಪರವಾಗಿ ಘೋಷಣೆ ಕೂಗುತ್ತೇವೆ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸುವುದನ್ನ ನಿಲ್ಲಿಸುವುದಿಲ್ಲ. ವರುಣನಾ ಕೃಪೆಯಿಂದ ಜಲಾಶಯ ತುಂಬುತ್ತಿದೆ. ರೈತರನ್ನು ಸಮಾಧಿ ಮಾಡುವುದನ್ನ ಬಿಟ್ಟು. ಇನ್ನಾದ್ರು ನೀರು ಹರಿಸುವುದನ್ನು ನಿಲ್ಲಿಸಲಿ ಎಂದು ಆಗ್ರಹಿಸಿದ್ದಾರೆ.