ಮಂಡ್ಯ: ಶ್ರೀರಂಗಪಟ್ಟಣ ದಸರಾದ ಲೋಗೋವನ್ನು ಸಚಿವ ಎನ್.ಚಲುವರಾಯಸ್ವಾಮಿ ಬಿಡುಗಡೆ ಮಾಡಿದರು.
ಅಕ್ಟೋಬರ್ 16 ರಿಂದ 18 ರವರೆಗೆ ಮೂರು ದಿನಗಳ ಕಾಲ ನಡೆಯಲಿರುವ ಶ್ರೀರಂಗಪಟ್ಟಣ ದಸರೆಯ ಲೋಗೋವನ್ನು ಜಿ.ಪಂ.ಕಾವೇರಿ ಸಭಾಂಗಣದಲ್ಲಿ ಬಿಡುಗಡೆ ಮಾಡಲಾಯಿತು,
ಮೂರು ದಿನಗಳ ಕಾಲ ಶ್ರೀರಂಗಪಟ್ಟಣ ದಸರಾ ಸಂಪ್ರದಾಯಿಕವಾಗಿ ನಡೆಯಲಿದೆ ಎಂದು ಇದೇ ಸಂದರ್ಭದಲ್ಲಿ ಸಚಿವರು ತಿಳಿಸಿದರು.
ಇದೇ ವೇಳೆ ಶಾಸಕ ಗಣಿಗ ರವಿಕುಮಾರ್, ರಮೇಶ್ ಬಾಬು ಬಂಡಿಸಿದ್ದೇಗೌಡ, ಡಿಸಿ ಡಾ.ಕುಮಾರ್, ಎಸ್ಪಿ ಎನ್.ಯತೀಶ್ ಸೇರಿದಂತೆ ಹಲವರು ಭಾಗಿಯಾಗಿದ್ದರು.