ಮಂಗಳೂರು (ದಕ್ಷಿಣ ಕನ್ನಡ): ಅಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಶನ್(ಐಟಾ) ಶಿಕ್ಷಕರ ರಾಷ್ಟ್ರ ಮಟ್ಟದ ಸಂಘಟನೆಯಾಗಿದ್ದು ಇದರ ವತಿಯಿಂದ ರಾಷ್ಟ್ರೀಯ ಶೈಕ್ಷಣಿಕ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ಪ್ರಯುಕ್ತ ಮಂಗಳೂರಿನ ಹಿರಾ ಕಾಲೇಜು ಸಭಾಂಗಣ ಬಬ್ಬುಕಟ್ಟೆ ತೊಕ್ಕೊಟ್ಟಿನಲ್ಲಿ ಅಕ್ಟೋಬರ್ 8 ರಂದು ಬೆಳಗ್ಗೆ 9:30 ರಿಂದ ಮಧ್ಯಾಹ್ನ 1ರ ವರೆಗೆ ದಕ್ಷಿಣ ಕನ್ನಡ ಜಿಲ್ಲಾ ಶೈಕ್ಷಣಿಕ ಸಮಾವೇಶ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಐಟಾ ಉಳ್ಳಾಲ ಅಧ್ಯಕ್ಷ ಡಾ.ಮುಹಮ್ಮದ್ ಹನೀಫ್ ಹೇಳಿದರು. ಅವರು ಮಂಗಳೂರು ನಗರದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಐಟಾ ಕರ್ನಾಟಕ ರಾಜ್ಯಾಧ್ಯಕ್ಷ ಮುಹಮ್ಮದ್ ರಝಾ ಮಾನ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಪಿ.ಎ. ಪ್ರಥಮ ದರ್ಜೆ ಕಾಲೇಜು, ನಡುಪದವು ಪ್ರಾಂಶುಪಾಲ ಡಾ. ಸರ್ಫರಾಜ್ , ಶೈಕ್ಷಣಿಕ ಮಾರ್ಗದರ್ಶನ ನೀಡಲಿದ್ದಾರೆ. ಜಮೀಯ್ಯತುಲ್ ಫಲಾಹ್ ದ.ಕ ಮತ್ತು ಉಡುಪಿ ಜಿಲ್ಲಾಧ್ಯಕ್ಷ ಕೆ.ಕೆ. ಶಾಹುಲ್ ಹಮೀದ್, ಬದ್ರಿಯಾ ಪದವಿ ಪೂರ್ವ ಕಾಲೇಜು ನಿವೃತ್ತ ಪ್ರಾಂಶುಪಾಲ ಡಾ.ಎನ್. ಇಸ್ಮಾಈಲ್ ಹಿರಾ ಮಹಿಳಾ ಕಾಲೇಜು ಪ್ರಾಂಶುಪಾಲೆ ಫಾತಿಮ ಮೆಹರೂನ್, ಸಮನ್ವಯ ಶಿಕ್ಷಕರ ಸಂಘ ದ.ಕ. ಜಿಲ್ಲಾಧ್ಯಕ್ಷ ಅಬ್ದುಲ್ ಮಜೀದ್ ಎಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಐಟಾ ದ.ಕ ಜಿಲ್ಲಾಧ್ಯಕ್ಷ ಮುಹಮ್ಮದ್ ಹನೀಫ್, ಐಟಾ ಉಳ್ಳಾಲ ಕಾರ್ಯದರ್ಶಿ ಕೆ.ಎಂ.ಕೆ. ಮಂಜನಾಡಿ, ಹಿರಾ ಶಿಕ್ಷಣ ಸಂಸ್ಥೆಯ ಕರೆಸ್ಪಾಂಡೆಂಟ್ ರಹ್ಮತುಲ್ಲಾಹ್ ಉಪಸ್ಥಿತರಿದ್ದರು.