Monday, April 21, 2025
Google search engine

Homeಸ್ಥಳೀಯಯುವ ಸಂಭ್ರಮಕ್ಕೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಚಾಲನೆ

ಯುವ ಸಂಭ್ರಮಕ್ಕೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಯುವ ಸಂಭ್ರಮಕ್ಕೆ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದರು. ಮೈಸೂರು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಶುಕ್ರವಾರ ಸಂಜೆ ಚಲನಚಿತ್ರ ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯ ಮುಖ್ಯ ಅತಿಥಿಗಳಾಗಿ ಭಾಗವಹಿಸುವ ಮೂಲಕ ಯುವ ಸಂಭ್ರಮಕ್ಕೆ ಮೆರುಗು ನೀಡಿದರು.

ಯುವ ಸಂಭ್ರಮದಲ್ಲಿ ಆಯ್ಕೆಯಾದ ಕಾಲೇಜುಗಳ ವಿದ್ಯಾರ್ಥಿಗಳಿಗೆ ಯುವ ದಸರಾದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗುವುದು. ಯುವ ಸಂಭ್ರಮದ ಆಚರಣೆಯಲ್ಲಿ ಹೊಸ ಕಲಾಪ್ರತಿಭೆಗಳನ್ನು ಹೊರತುವ ಉದೇಶವಾಗಿದೆ. ರಾಜ್ಯದ ೪೦೦ ಕ್ಕೂ ಹೆಚ್ಚು ಕಾಲೇಜುಗಳ ೧೨೦೦ ಕ್ಕೂ ಹೆಚ್ಚು ಯುವಕರು, ಯುವತಿಯರು ಯುವ ಸಂಭ್ರಮದಲ್ಲಿ ಭಾಗವಹಿಸಿದ್ದು, ಮೊದಲ ದಿನವಾದ ಇಂದು ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಂದ ಹಲವು ಸಾಂಸ್ಕೃತಿ ಕಾರ್ಯಕ್ರಮಗಳು ಜರುಗಿದವು.

ಕಾರ್ಯಕ್ರಮದಲ್ಲಿ ಮೈಸೂರು ಮೇಯರ್ ಶಿವಕುಮಾರ್, ಉಪಮೇಯರ್ ಜಿ.ರೂಪಾ, ಶಾಸಕರುಗಳಾದ ಕೆ.ಹರೀಶ್ ಗೌಡ, ಡಿ.ರವಿಶಂಕರ್, ವಿಧಾನಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಯುವ ಸಂಭ್ರಮ ವಿಶೇಷಾಧಿಕಾರಿ ಸೀಮಾ ಲಾಟ್ಕರ್, ಜಿ.ಪಂ. ಸಿಇಓ ಗಾಯಿತ್ರಿ ಸೇರಿದಂತೆ ಹಲವರು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular