Monday, April 21, 2025
Google search engine

Homeರಾಜ್ಯಸುದ್ದಿಜಾಲರಕ್ತದಾನ ಮಹಾದಾನ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು: ಶಾಸಕ ಡಿ.ರವಿಶಂಕರ್

ರಕ್ತದಾನ ಮಹಾದಾನ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು: ಶಾಸಕ ಡಿ.ರವಿಶಂಕರ್

ಸಾಲಿಗ್ರಾಮ: ರಕ್ತದಾನವು ಮಹಾದಾನವಾಗಿದ್ದು ಇದರ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕಾದ ಅಗತ್ಯತೆ ಇದೆ ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.

ಅವರು ಕರ್ನಾಟಕ ಪ್ರೆಸ್ ಕ್ಲಬ್ ಕೃಷ್ಣರಾಜನಗರ ತಾಲೂಕು ಘಟಕ, ಯುವ ರೆಡ್ ಕ್ರಾಸ್, ಎನ್ ಎಸ್ ಎಸ್ ಘಟಕಗಳು, ಭಾರತ್ ಸ್ಕೌಟ್ಸ್ & ಗೈಡ್ಸ್ , ಹಿರಿಯ ವಿದ್ಯಾರ್ಥಿಗಳ ಸಂಘ, ಗ್ರಾಮೀಣ ನಿಧಿ ಸೌಹಾರ್ದ ಕೋ ಆಪರೇಟಿವ್ ಲಿಮಿಟೆಡ್, ಕೆ.ಆರ್.ಆಸ್ಪತ್ರೆಯ ರಕ್ತ ನಿಧಿ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ ಇವರುಗಳ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ರಕ್ತ ದಾನದ ಬಗ್ಗೆ ಜನರಲ್ಲಿ ತಪ್ಪು ಕಲ್ಪನೆ ಇದೆ. ಪ್ರಜ್ಞಾವಂತ ನಾಗರಿಕರು ಹಾಗೂ ಯುವ ಸಮೂಹ ಇದರ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕಿದೆ. ರಕ್ತದಾನ ಮಾಡುವುದರಿಂದ ಮತ್ತೊಂದು ಜೀವವನ್ನು ಉಳಿಸಬಹುದಾಗಿದೆ. ಇಂತಹ ಮಹತ್ಕಾರ್ಯದಲ್ಲಿ ಸರ್ವರೂ ಸ್ವಯಂ ಪ್ರೇರಿತರಾಗಿ ಪಾಲ್ಗೊಳ್ಳುವ ಮೂಲಕ ಸಮಾಜಮುಖಿ ಕಾರ್ಯಗಳನ್ನು ಮಾಡಬೇಕು ಎಂದು ಕರೆ ನೀಡಿದರು. ಸಾಲಿಗ್ರಾಮ ಮತ್ತು ಕೆ.ಆರ್.ನಗರ ಅವಳಿ ತಾಲೂಕುಗಳಲ್ಲಿ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುವುದು ಎಂದರು.

ಕರ್ನಾಟಕ ಪ್ರೆಸ್ ಕ್ಲಬ್‌ನ ತಾಲೂಕು ಅಧ್ಯಕ್ಷ ಕೆ.ಟಿ.ಮೋಹನ್ ಕುಮಾರ್ ಮಾತನಾಡಿ ಸಾಲಿಗ್ರಾಮ ಮತ್ತು ಕೆ.ಆರ್.ನಗರ ಅವಳಿ ತಾಲೂಕುಗಳಲ್ಲಿ ನಮ್ಮ ಕ್ಲಬ್ ವತಿಯಿಂದ ಹಲವು ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡಿಕೊಂಡು ಬರಲಾಗುತ್ತಿದೆ. ಈ ಸಾಲಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ, ವಿವಿಧ ಕ್ಷೇತ್ರಗಳ ಸಾಧಕರುಗಳಿಗೆ ಸನ್ಮಾನ, ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಪೌರ ಕಾರ್ಮಿಕರಿಗೆ ಸನ್ಮಾನ ಹೀಗೆ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಮುಂದಿನ ದಿನಗಳಲ್ಲಿಯೂ ಕೃಷ್ಣರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಭಾಗಗಳಲ್ಲಿ ಹಲವು ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ರಕ್ತದಾನ ಶಿಬಿರದಲ್ಲಿ ಸ್ವಯಂ ಪ್ರೇರಿತರಾಗಿ ಸುಮಾರು ೬೫ ರಕ್ತದಾನಿಗಳು ರಕ್ತದಾನ ಮಾಡಿದರು.

ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಸ್.ಹಂಸವೇಣಿ, ಕರ್ನಾಟಕ ಪ್ರೆಸ್ ಕ್ಲಬ್ ತಾಲೂಕು ಘಟಕದ ಅಧ್ಯಕ್ಷ ಕೆ.ಟಿ.ಮೋಹನ್ ಕುಮಾರ್, ಪೊಲೀಸ್ ಇನ್ಸ್ಪೆಕ್ಟರ್ ಬಿ.ಕೃಷ್ಣರಾಜು, ಮೈಸೂರಿನ ಕೆ.ಆರ್.ಆಸ್ಪತ್ರೆಯ ರಕ್ತ ನಿಧಿ ಕೇಂದ್ರದ ಡಾ.ಮಂಜುನಾಥ್, ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಕೀರ್ತಿ, ಡಾ.ಮಂಜುನಾಥ್, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಜಿಲ್ಲಾ ಸಂಯೋಜಕ ಜವಹಾರ ಮುಗ್ಗನವರ, ಗ್ರಾಮೀಣ ನಿಧಿ ಸೌಹಾರ್ದ ಕೋ ಆಪರೇಟಿವ್ ಲಿ. ಅಧ್ಯಕ್ಷ ಕೆ.ಆರ್.ಶ್ಯಾಮ್ ಸುಂದರ್, ಗ್ರಾ.ಪಂ. ಪಿಡಿಓ ಮಂಜುನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉದಯಶಂಕರ್, ಜಿಲ್ಲಾ ಕಾಂಗ್ರೆಸ್ ಹಿರಿಯ ಕಾರ್ಯದರ್ಶಿ ಎಸ್.ಎಸ್.ಸಂದೇಶ, ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಕೆ.ಎನ್.ತುಳಸಿ ಕುಮಾರ್, ಸಂಚಾಲಕ ನರಸಿಂಹ, ಗ್ರಾಫಿಕ್ ಚಿತ್ರಕಲಾವಿದ ಎಸ್.ಜೆ.ಗಣೇಶ್, ಕಾಲೇಜಿನ ಪ್ರಾಧ್ಯಾಪಕರುಗಳು, ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು, ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಸೇರಿದಂತೆ ಹಲವರು ಇದ್ದರು.

RELATED ARTICLES
- Advertisment -
Google search engine

Most Popular