Monday, April 21, 2025
Google search engine

Homeರಾಜ್ಯಸುದ್ದಿಜಾಲಪಿ.ಎಂ. ಸ್ವ-ನಿಧಿ ಯೋಜನೆಯಡಿ ಸಾಲ ಸೌಲಭ್ಯ ಸದುಪಯೋಗಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮನವಿ

ಪಿ.ಎಂ. ಸ್ವ-ನಿಧಿ ಯೋಜನೆಯಡಿ ಸಾಲ ಸೌಲಭ್ಯ ಸದುಪಯೋಗಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮನವಿ

ಚಾಮರಾಜನಗರ: ಸಾಮಾನ್ಯ ಜನರಿಗೆ ವಿವಿಧ ಕ್ಷೇತ್ರಗಳಲ್ಲಿ ಸೇವೆಯನ್ನು ಒದಗಿಸುತ್ತಿರುವ ವ್ಯಾಪಾರಸ್ಥರು, ಮಾರಾಟಗಾರರು ಸೇರಿದಂತೆ ವಿವಿಧ ವರ್ಗದವರಿಗೆ ಪಿ.ಎಂ. ಸ್ವ-ನಿಧಿ ಯೋಜನೆಯಡಿ ಸಾಲ ಸೌಲಭ್ಯ ನೀಡಲಿದ್ದು, ಚಾಮರಾಜನಗರ ಮತ್ತು ಕೊಳ್ಳೇಗಾಲ ನಗರಸಭೆ, ಗುಂಡ್ಲುಪೇಟೆ ಪುರಸಭೆ, ಯಳಂದೂರು ಮತ್ತು ಹನೂರು ಪಟ್ಟಣ ಪಂಚಾಯಿತಿ ಕಚೇರಿಗಳಿಗೆ ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದ್ದಾರೆ.

ಬೀದಿ ಬದಿ ವ್ಯಾಪಾರಿಗಳ ಆರ್ಥಿಕ ಸಬಲೀಕರಣಕ್ಕಾಗಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಪ್ರಧಾನಮಂತ್ರಿ ಬೀದಿಬದಿ ವ್ಯಾಪಾರಿಗಳ ಆತ್ಮನಿರ್ಭರ್ ನಿಧಿ ವಿಶೇಷ ಕಿರು ಸಾಲ ಯೋಜನೆಯನ್ನು ಜಾರಿಗೊಳಿಸಿದೆ.

ಬೀದಿ ವ್ಯಾಪಾರಸ್ಥರಿಗೆ ಮೊದಲನೇ ಹಂತದಲ್ಲಿ 10 ಸಾವಿರ ರೂ., ಎರಡನೇ ಹಂತದಲ್ಲಿ 20 ಸಾವಿರ ರೂ. ಮತ್ತು ಮೂರನೇ ಹಂತದಲ್ಲಿ 50 ಸಾವಿರ ರೂ. ಗಳವರೆಗೆ ಕಿರುಸಾಲ ಸೌಲಭ್ಯವನ್ನು ಕೈಗೆಟಕುವ ಬಡ್ಡಿ ದರದಲ್ಲಿ ನೀಡಲಾಗುತ್ತದೆ. ಯೋಜನೆಯು 2024ರ ಡಿಸೆಂಬರ್ 31ರವರೆಗೆ ಜಾರಿಯಲ್ಲಿದ್ದು, ಈಗಾಗಲೇ ಚಾಮರಾಜನಗರ ಜಿಲ್ಲೆಯ 5 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ (ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ) ಅನುಷ್ಠಾನಗೊಳಿಸಲಾಗುತ್ತಿದೆ.

ಯೋಜನೆಯಡಿ ಸಾಮಾನ್ಯ ಜನರಿಗೆ ವಿವಿಧ ಕ್ಷೇತ್ರಗಳಲ್ಲಿ ಸೇವೆಯನ್ನು ಒದಗಿಸುತ್ತಿರುವ ದೋಬಿ ಮತ್ತು ಇಸ್ತ್ರಿ, ಹಳೆಯ ಪಾತ್ರೆಗಳನ್ನು ವ್ಯಾಪಾರ ಮಾಡುವವರು, ಬಡಗಿ, ಚಮ್ಮಾರರು, ಬಿದಿರಿನ ಬುಟ್ಟಿ, ಬೊಂಬು, ಬಾಸ್ಕೆಟ್, ಏಣಿ ವ್ಯಾಪಾರಸ್ಥರು, ಹೂವಿನ ಕುಂಡಗಳನ್ನು ಮಾರುವವರು, ನೇಯ್ಗೆಗಾರರು, ಎಳನೀರು ಮಾರಾಟಗಾರರು, ಆಹಾರ ತಯಾರಿಸಿ ಮಾರಾಟ ಮಾಡುವವರು (ಕ್ಯಾರಿಂಗ್ ಸರ್ವೀಸ್), ಮನೆ ಮನೆಗೆ ಹೋಗಿ ಹಾಲು ಮಾರಾಟ ಮತ್ತು ಹಂಚಿಕೆ ಮಾಡುವವರು ಮತ್ತು ದಿನ ಪತ್ರಿಕೆಗಳನ್ನು ಮನೆ ಮನೆಗೆ ಹಂಚುವವರನ್ನು ಸಹ ಪಿಎಂ ಸ್ವ-ನಿಧಿ ಯೋಜನೆಯಡಿ ಫಲಾನುಭವಿಗಳನ್ನಾಗಿ ಸೇರ್ಪಡೆ ಮಾಡಿಕೊಳ್ಳಲಾಗಿದೆ.

ಸಾಮಾನ್ಯ ಜನರಿಗೆ ಸೇವೆ ಒದಗಿಸುತ್ತಿರುವ ಎಲ್ಲಾ ವರ್ಗದವರು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಾಸಿಸುತ್ತಿರುವವರು ಪಿ.ಎಂ. ಸ್ವ-ನಿಧಿ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿದ್ದಾರೆ. ಚಾಮರಾಜನಗರ ಮತ್ತು ಕೊಳ್ಳೇಗಾಲ ನಗರಸಭೆ, ಗುಂಡ್ಲುಪೇಟೆ ಪುರಸಭೆ, ಯಳಂದೂರು ಮತ್ತು ಹನೂರು ಪಟ್ಟಣ ಪಂಚಾಯಿತಿಯ ಕಾರ್ಯಾಲಯಗಳಿಗೆ ಭೇಟಿ ನೀಡಿ ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular