ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಬಳಿಯ ಮಹಾತ್ಮಗಾಂಧಿ ಪ್ರತಿಮೆ ಎದುರು ರಾಹುಲ್ ಗಾಂಧಿ ಅವರ ವಿರುದ್ಧ ಪ್ರಧಾನಿ ಪ್ರಚೋದನಕಾರಿ ಹೇಳಿಕೆಯನ್ನು ನೀಡಿದ್ದಾರೆಂದು ಖಂಡಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು. ದ್ವೇಷದ ರಾಜಕಾರಣದ ವಿರುದ್ಧ ಭಾರತ್ ಜೋಡೋ ಯಾತ್ರೆಯ ಮೂಲಕ ಪ್ರೀತಿಯನ್ನು ಹಂಚುವ ರಾಹುಲ್ ಗಾಂಧಿ ವಿರುದ್ಧ ಅಧಿಕಾರದ ದುರಾಸೆಯಿಂದ ಪ್ರಧಾನಿ ಮೋದಿಯವರು ಪ್ರಚೋದನಕಾರಿ ಹೇಳಿಕೆಯನ್ನು ನೀಡಿದ್ದಾರೆ. ಇದು ಖಂಡನೀಯ ಎಂದು ಇದೇ ವೇಳೆ ಮಾತನಾಡುತ್ತಾ ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.