Monday, April 21, 2025
Google search engine

Homeಅಪರಾಧಶಿವಮೊಗ್ಗ: ಒಂದೇ ಕುಟುಂಬದ ಮೂವರು ಸಜೀವ ದಹನ

ಶಿವಮೊಗ್ಗ: ಒಂದೇ ಕುಟುಂಬದ ಮೂವರು ಸಜೀವ ದಹನ

ಶಿವಮೊಗ್ಗ: ಒಂದೇ ಕುಟುಂಬದ ಮೂವರು ಸಜೀವ ದಹನವಾಗಿದ್ದು, ಓರ್ವ ತೀವ್ರವಾಗಿ ಗಾಯಗೊಂಡಿರುವ ಘಟನೆ ತೀರ್ಥಹಳ್ಳಿಯ ಅರಳಸುರಳಿ ಗ್ರಾಮದ ಬಳಿ ಶನಿವಾರ ರಾತ್ರಿ ನಡೆದಿರುವುದು ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.

ಹೊಸನಗರ ರಸ್ತೆಯ ಗಣಪತಿ ಕಟ್ಟೆ ರೈಸ್‌ಮಿಲ್ ಹತ್ತಿರದ ಮನೆಯೊಂದರಲ್ಲಿ ದುರಂತ ಜರುಗಿದೆ. ರಾಘವೇಂದ್ರ (೬೩), ಪತ್ನಿ ನಾಗರತ್ನ (೫೫) ಹಾಗೂ ಪುತ್ರ ಶ್ರೀರಾಮ್ (೩೪) ಮೃತರು. ಇನ್ನೊಬ್ಬ ಪುತ್ರ ಭರತ್ (೩೦) ಗಂಭೀರವಾಗಿ ಗಾಯಗೊಂಡಿದ್ದು, ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ರವಾನಿಸಲಾಗಿದೆ. ಮನೆ ಭಾಗಶಃ ಸುಟ್ಟು ಹೋಗಿದೆ. ತೀರ್ಥಹಳ್ಳಿ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ರಾಘವೇಂದ್ರ ಗ್ರಾಮದಲ್ಲಿ ಅರ್ಚಕ ವೃತ್ತಿ ಮಾಡುತ್ತಿದ್ದರು. ಮನೆಯ ಹಾಲ್‌ನಲ್ಲಿಯೇ ಕಟ್ಟಿಗೆ ಜೋಡಿಸಿಟ್ಟು ಬೆಂಕಿ ಹಚ್ಚಿಕೊಂಡಿರುವ ಕುರುಹುಗಳು ಪತ್ತೆಯಾಗಿವೆ. ಗ್ರಾಮಸ್ಥರು ಹೊಗೆ ಗಮನಿಸಿ ಮನೆಯಲ್ಲಿದ್ದವರನ್ನು ರಕ್ಷಿಸಲು ಯತ್ನಿಸಿದ್ದಾರೆ. ಓರ್ವನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕುಟುಂಬ ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ.

RELATED ARTICLES
- Advertisment -
Google search engine

Most Popular