ಧಾರವಾಡ : ಕರ್ನಾಟಕ ಅಭಿವೃದ್ಧಿ ಯೋಜನೆಯ ಎರಡನೇ ತ್ರೈಮಾಸಿಕ ಕೆಡಿಪಿ ಸಭೆಯನ್ನು ಅ.೧೧ ರಂದು ಬೆಳಿಗ್ಗೆ ೧೧ ಗಂಟೆಗೆ ಕಾರ್ಮಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಆಯೋಜಿಸಲಾಗಿದೆ.
ಅಧಿಕಾರಿಗಳು ತಮ್ಮ ಇಲಾಖಾ ಪ್ರಗತಿ ವರದಿ ಮತ್ತು ಅನುಪಾಲನಾ ವರದಿಗಳೊಂದಿಗೆ ಸಭೆಗೆ ಖುದ್ದಾಗಿ ಹಾಜರಾಗಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.