ಬೆಂಗಳೂರು: ಅತ್ತಿಬೆಲೆಯಲ್ಲಿರುವ ಪಟಾಕಿ ಗೋಡೌನ್ ಅಗ್ನಿ ದುರಂತ ಪ್ರಕರಣ ಸಂಬಂಧ ಸ್ದಳಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಈ ವೇಳೆ ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ, ಅಗ್ನಿಶಾಮಕ ಡಿಜಿ ಕಮಲ್ ಪಂತ್ ಅವರ ಚರ್ಚಿಸಿ ಮಾಹಿತಿ ಪಡೆದುಕೊಂಡರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಅತ್ತಿಬೆಲೆಯಲ್ಲಿನ ಪಟಾಕಿ ಗೋಡೌನ್ ಅಗ್ನಿ ದುರಂತ ದುರದೃಷ್ಟಕರ. ಪ್ರಕರಣವನ್ನು ಸಿಐಡಿಗೆ ನೀಡಲಾಗುವುದು. ಮೃತರ ಕುಟಂಬಸ್ಥರಿಗೆ ಐದು ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಘೋಷಿಸಿದರು. ಇವರೊಂದಿಗೆ ಸಚಿವರಾದ ರಾಮಲಿಂಗಾರೆಡ್ಡಿ, ಭೈರತಿ ಸುರೇಶ್, ಶಾಸಕ ಎಸ್.ಟಿ.ಸೋಮಶೇಖರ್ ಸೇರಿದಂತೆ ಹಲವರು ಇದ್ದಾರೆ.
