ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರೆಗೆ ದಿನಗಣನೆ ಆರಂಭವಾಗಿದೆ. ಈ ಹಿನ್ನೆಲೆ ಮತ್ತೊಂದೆಡೆ ದಸರಾ ಚಲನಚಿತ್ರೋತ್ಸವ ಉಪ ಸಮಿತಿ ಸುದ್ದಿಗೋಷ್ಠಿ ನಡೆಸಿದ್ದು ಅ. ೧೫ ರಂದು ಮೈಸೂರಿನ ಕಲಾಮಂದಿರದಲ್ಲಿ ಬೆಳಿಗ್ಗೆ ೧೦ ಗಂಟೆಗೆ ಚಲನಚಿತ್ರೋತ್ಸವ ಉದ್ಘಾಟನೆಯಾಗಲಿದೆ ಎಂದು ಮಾಹಿತಿ ನೀಡಿದೆ. ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ಅವರು ಚಲನಚಿತ್ರೋತ್ಸವ ಉದ್ಘಾಟನೆ ಮಾಡಿದರು.
ಸಾಧುಕೋಕಿಲ ತಂಡದಿಂದ ಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದೇ ವೇಳೆ ಹಾಸ್ಯಚಕ್ರವರ್ತಿ ನರಸಿಂಹರಾಜುರ ೧೦೦ ನೇ ಜನ್ಮದಿನದ ಹಂಗವಾಗಿ ಅವರ ಮಗಳಾದ ಸುಧಾರವರಿಗೆ ಗೌರವ ಸಲ್ಲಿಸಲಾಗುತ್ತೆ. ಅ. ೧೬ ರಿಂದ ಚಲನಚಿತ್ರ ಪ್ರದರ್ಶನ ನಡೆಯಲಿದೆ. ಏಳು ದಿನಗಳ ಕಾಲ ವೀಕ್ಷಣೆ ಮಾಡಲು ಅವಕಾಶ ನೀಡಲಾಗಿದೆ.
ಈ ಬಾರಿ ಚಲನಚಿತ್ರೋತ್ಸವದಲ್ಲಿ ೧೧೨ ಚಿತ್ರಗಳ ಪ್ರದರ್ಶನ ಇರಲಿದೆ. ಸಿನಿಪ್ರಿಯರಿಗೆ ಆನ್ ಲೈನ್ ಮೂಲಕ ಪಾಸ್ ವಿತರಣೆ ಮಾಡಲಾಗುತ್ತೆ. ಸಾರ್ವಜನಿಕರಿಗೆ ೫೦೦ ರೂ, ವಿದ್ಯಾರ್ಥಿಗಳಿಗೆ ೩೦೦ ರೂ ನಿಗದಿ. ಮಾಡಲಾಗಿದೆ. Inox ಹಾಗೂ DRC ಥಿಯೇಟರ್ ನಲ್ಲಿ ಕನ್ನಡ ಹಾಗೂ ವಿಶ್ವದ ಅತ್ಯುತ್ತಮ ಚಿತ್ರಗಳ ಪ್ರದರ್ಶನವಾಗಲಿದೆ ಎಂದು ದಸರಾ ಚಲಚಿತ್ರ ಉಪಸಮಿತಿ ವಿಶೇಷ ಅಧಿಕಾರಿ ಹಾಗೂ ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಎಂ.ಕೆ.ಸವಿತಾ ಮಾಹಿತಿ ನೀಡಿದರು.
ಅ.೯ರ ಬೆಳಗ್ಗೆ ೧೦.೩೦ ರಿಂದ ಸಂಜೆ ೪.೩೦ ರವರೆಗೆ ನಗರದ ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ ಸಿನಿಮಾ ಪ್ರಿಯರಿಗೆ ಚಲನಚಿತ್ರೋತ್ಸವ ಪ್ರದರ್ಶನದ ಪಾಸ್ ವಿತರಿಸಲಾಗುತ್ತಿದೆ.
ಮೈಸೂರು ಅರಮನೆ ಆವರಣದಲ್ಲಿ ಸಂಜೆ ನಡೆಯುವ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ. ೨೦೨೩ರ ದಸರಾ ಮಹೋತ್ಸವದ ಪೂರ್ವಬಾವಿ ಕೆಲಸ ಹಿನ್ನೆಲೆ ದಿ. ೦೯/೧೦/೨೦೨೩ ರಿಂದ ೩೧/೧೦/೨೦೨೩ ರವರೆಗೆ ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ. ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಕಾರಣ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ.
ಈ ಬಾರಿ ದಸರಾ ಜಂಬೂಸವಾರಿಯಲ್ಲಿ ೩೬ ಸ್ತಬ್ಧಚಿತ್ರಗಳ ಪ್ರದರ್ಶವಾಗಲಿದೆ. ವಿವಿಧ ಜಿಲ್ಲೆಗಳ ೩೧ ಸ್ತಬ್ಧಚಿತ್ರ, ೫ ವಿವಿಧ ಇಲಾಖೆಯ ಸ್ತಬ್ಧಚಿತ್ರ ಪ್ರದರ್ಶನಕ್ಕೆ ತಯಾರಿ ನಡೆದಿದೆ. ಮೈಸೂರು ನಂಜನಗೂಡು ರಸ್ತೆಯ ಬಂಡಿಪಾಳ್ಯದಲ್ಲಿ ನಾಳೆಯಿಂದ (ಅ.೧೦) ಸ್ತಬ್ಧಚಿತ್ರ ತಯಾರಿಸುವ ಕಾರ್ಯ ಆರಂಭವಾಗಲಿದೆ.