Monday, April 21, 2025
Google search engine

Homeರಾಜ್ಯಸುದ್ದಿಜಾಲರಾಜ್ಯದಲ್ಲಿ ಬರ: ಕೇಂದ್ರದಿಂದ 21 ತಾಲೂಕುಗಳ ಪಟ್ಟಿ ಬಿಡುಗಡೆ

ರಾಜ್ಯದಲ್ಲಿ ಬರ: ಕೇಂದ್ರದಿಂದ 21 ತಾಲೂಕುಗಳ ಪಟ್ಟಿ ಬಿಡುಗಡೆ

ಬೆಂಗಳೂರು : ರಾಜ್ಯದಲ್ಲಿ ಹೊಸದಾಗಿ ಬರ ಪೀಡಿತ ತಾಲೂಕುಗಳು ಎಂದು ಘೋಷಿಸಲು ಉದ್ದೇಶಿಸಿರುವ ೨೧ ತಾಲೂಕುಗಳಲ್ಲಿ ಆಪ್ ಮೂಲಕ ತಳಮಟ್ಟದ ನೈಜ ಸ್ಥಿತಿ ಪರಿಶೀಲಿಸಿ, ಬರ ಕೈಪಿಡಿ ಅನ್ವಯ ದೃಢೀಕರಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆ ಸುತ್ತೋಲೆ ಹೊರಡಿಸಿದೆ.

ಮುಂಗಾರಿನಲ್ಲಿ ಉಂಟಾದ ಮಳೆ ಕೊರತೆಯಿಂದಾಗಿ ಈಗಾಗಲೇ ಬರ ಘೋಷಣೆ ಆಗಿರುವ ೧೯೫ ತಾಲೂಕು ಹೊರತುಪಡಿಸಿ ಇನ್ನೂ ೨೧ ತಾಲೂಕುಗಳಲ್ಲಿ ಬರ ಉಂಟಾಗಿರುವುದಾಗಿ ಸಚಿವ ಸಂಪುಟ ಉಪ ಸಮಿತಿ ಶಿಫಾರಸು ಮಾಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ೨೧ ತಾಲೂಕುಗಳ ಪಟ್ಟಿ ಬಿಡುಗಡೆ ಮಾಡಿದೆ.

ಈ ತಾಲೂಕುಗಳಲ್ಲಿ ಶೇಕಡಾ ೧೦ರಷ್ಟು ಗ್ರಾಮಗಳನ್ನು ಆಯ್ಕೆ ಮಾಡಿ ಪ್ರಮುಖ ಬೆಳೆಗಳನ್ನು ಗುರುತಿಸಿ ಪ್ರತಿ ಬೆಳೆಗಳ ಸುಮಾರು ೫ ಜಮೀನುಗಳಿಗೆ (೧ ಎಕರೆಗಿಂತ ಕಡಿಮೆ ಇಲ್ಲದ) ಭೇಟಿ ನೀಡಬೇಕು. ಹಾಗೂ ಇ-ಆಡಳಿತ ಇಲಾಖೆ ಅಭಿವೃದ್ಧಿಪಡಿಸಿರುವ ಆ?ಯಪ್ ಮೂಲಕ ಗ್ರೌಂಡ್ ಟ್ರೂತನಿಂಗ್ ಮಾಡಿ ಬರ ಕೈಪಿಡಿಯಲ್ಲಿ ನಮೂದಿಸಿರುವ ದೃಢೀಕರಣ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಚಾಮರಾಜನಗರ, ಯಳಂದೂರು, ಕೃಷ್ಣರಾಜನಗರ, ಬೆಳಗಾವಿ, ಖಾನಾಪುರ, ಮುಂಡರಗಿ, ಬ್ಯಾಡಗಿ, ಹಾನಗಲ್, ಶಿಗ್ಗಾಂವಿ, ಕಲಘಟಗಿ, ಅಳ್ನಾವರ, ಅಣ್ಣಿಗೇರಿ, ಆಲೂರು, ಅರಸೀಕೆರೆ, ಹಾಸನ, ಮೂಡಿಗೆರೆ, ತರೀಕೆರೆ, ಪೊನ್ನಂಪೇಟೆ, ಹೆಬ್ರಿ, ಸಿದ್ದಾಪುರ ಹಾಗೂ ದಾಂಡೇಲಿ.

RELATED ARTICLES
- Advertisment -
Google search engine

Most Popular