Monday, April 21, 2025
Google search engine

Homeರಾಜ್ಯಸುದ್ದಿಜಾಲಅರಣ್ಯ ವ್ಯಾಪ್ತಿಯಲ್ಲಿ ಉಳುಮೆ ಮಾಡುತ್ತಿದ್ದವರಿಗೆ ೩ ತಿಂಗಳಲ್ಲೇ ಹಕ್ಕು ಪತ್ರ ವಿತರಣೆ

ಅರಣ್ಯ ವ್ಯಾಪ್ತಿಯಲ್ಲಿ ಉಳುಮೆ ಮಾಡುತ್ತಿದ್ದವರಿಗೆ ೩ ತಿಂಗಳಲ್ಲೇ ಹಕ್ಕು ಪತ್ರ ವಿತರಣೆ


ಬೆಂಗಳೂರು: ಅರಣ್ಯ ವ್ಯಾಪ್ತಿಯಲ್ಲಿ ಉಳುಮೆ ಮಾಡುತ್ತಿದ್ದವರಿಗೆ ಮೂರು ತಿಂಗಳಲ್ಲಿ ಹಕ್ಕು ಪತ್ರ ವಿತರಿಸಲು ಅಧಿಕಾರಿಗಳಿಗೆ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.
ಮಂಗಳೂರಿನ ಬೆಳ್ತಂಗಡಿಯ ಕಳೆಂಜ ಗ್ರಾಮದಲ್ಲಿ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮ ಮನೆ ನಿರ್ಮಾಣ ಮಾಡಿದ ಹಿನ್ನಲೆ ಅರಣ್ಯ ಇಲಾಖೆಯು ಫೌಂಡೇಶನ್ ಸಮೇತ ಮನೆಯನ್ನ ಧ್ವಂಸಗೊಳಿಸಿತ್ತು. ಸ್ಥಳಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡಿದ್ದರು. ಸದ್ಯ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಈಶ್ವರ್ ಖಂಡ್ರೆ, ಮೂರು ತಿಂಗಳಲ್ಲಿ ಹಕ್ಕುಪತ್ರ ವಿತರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ, ೧೯೭೮ರ ಪೂರ್ವದಿಂದಲೂ ಅರಣ್ಯ ವ್ಯಾಪ್ತಿಯಲ್ಲಿ ನೆಲೆಸಿರುವವರು, ಅರಣ್ಯ ವ್ಯಾಪ್ತಿಯಲ್ಲಿ ಕೃಷಿ ಮಾಡುತ್ತಿದ್ದವರಿಗೆ ಹಕ್ಕು ಪತ್ರ ವಿತರಣೆ ಮಾಡಲು ಮುಖ್ಯಮಂತ್ರಿಗಳು ಕೂಡ ಸೂಚನೆ ಕೊಟ್ಟಿದ್ದಾರೆ ಎಂದರು. ಶಾಸಕ ಹರೀಶ್ ಪೂಂಜ ಸೇರಿದಂತೆ ಸಾರ್ವಜನಿಕರಲ್ಲಿ ಮನವಿ ಮಾಡ್ತೇನೆ.

ಪ್ರಕೃತಿ ಉಳಿಯಬೇಕಂದ್ರೆ ಅರಣ್ಯ ಕಾಯ್ದೆ ಉಲ್ಲಂಘನೆ ಆಗಬಾರದು. ಸುಮಾರು ವರ್ಷಗಳಿಂದ ವಾಸವಿರುವವರಿಗೆ ತೊಂದರೆ ಕೊಡಬಾರದು ಅಂತ ಅರಣ್ಯಾಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇವೆ. ಈಗಾಗಲೇ ೧೯೭೮ರ ಪೂರ್ವದಲ್ಲಿ ಅರಣ್ಯ, ಅರಣ್ಯದಂಚಿನಲ್ಲಿ ಯಾರ್ಯಾರು ವಾಸವಿದ್ದಾರೆ. ಯಾರ್ಯಾರು ಉಳುಮೆ ಮಾಡ್ತಿದ್ದಾರೆ ಅಂತವರ ಪಟ್ಟಿ ಮಾಡಿ ಹಕ್ಕುಪತ್ರ ಕೊಡಲು ತೀರ್ಮಾನಿಸಲಾಗಿದೆ. ಹಕ್ಕುಪತ್ರ ಕೊಡುವ ಕೆಲಸವನ್ನ ಮೂರು ತಿಂಗಳೊಳಗೆ ಮುಗಿಸುವಂತೆ ಆದೇಶ ಮಾಡಿದ್ದೇವೆ. ಮುಖ್ಯಮಂತ್ರಿಗಳು ಕೂಡ ಇದಕ್ಕೆ ಸೂಚನೆ ಕೊಟ್ಟಿದ್ದಾರೆ ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular