Monday, April 21, 2025
Google search engine

Homeರಾಜ್ಯಹಬ್ಬ, ಮದುವೆ, ರಾಜಕೀಯ ಕಾರ್ಯಕ್ರಮದಲ್ಲಿ ಪಟಾಕಿ ನಿಷೇಧ: ಸಿಎಂ ಸಿದ್ದರಾಮಯ್ಯ

ಹಬ್ಬ, ಮದುವೆ, ರಾಜಕೀಯ ಕಾರ್ಯಕ್ರಮದಲ್ಲಿ ಪಟಾಕಿ ನಿಷೇಧ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶ ಇದೆ. ಇನ್ನುಳಿದಂತೆ ಗಣೇಶ ಹಬ್ಬ, ಮದುವೆ, ರಾಜಕೀಯ ಕಾರ್ಯಕ್ರಮಗಳಲ್ಲಿ ಪಟಾಕಿ ಹಚ್ಚುವುದನ್ನು ನಿಷೇಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಪಟಾಕಿ ಸಿಡಿಸುವಾಗ ಸುಪ್ರೀಂಕೋರ್ಟ್ ಆದೇಶ ಪಾಲನೆ ಕಡ್ಡಾಯವಾಗಿದ್ದು, ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದರು.

ಅತ್ತಿಬೆಲೆ ಪಟಾಕಿ ದುರಂತ ಸಂಬಂಧ ನಡೆದ ಸಭೆಯ ಬಳಿಕ ಗೃಹಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಪಟಾಕಿ ಅಗ್ನಿ ದುರಂತ ತಡೆ ಸಂಬಂಧ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ. ದೀಪಾವಳಿ ಸಮೀಪವೇ ಬರುತ್ತಿದೆ. ಹೀಗಾಗಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗುತ್ತಿದ್ದೇವೆ ಎಂದರು.

ರಾಮಸ್ವಾಮಿ ರೆಡ್ಡಿ ಎಂಬಾತ ಪಟಾಕಿ ಮಾರಾಟಕ್ಕೆ ಅನುಮತಿ ಪಡೆದಿದ್ದ. ಗೋಡೌನ್ ​ನಲ್ಲಿ ಮಿತಿ ಮೀರಿ ಪಟಾಕಿ ಸಂಗ್ರಹಕ್ಕೆ ಅನುಮತಿ ಪಡೆದಿರಲಿಲ್ಲ. ಹೀಗಾಗಿ ತಹಶೀಲ್ದಾರ್​, ಇನ್ಸ್​​ ಪೆಕ್ಟರ್​​, ಅಗ್ನಿಶಾಮಕ ಅಧಿಕಾರಿಯನ್ನು ಅಮಾನತ್ತಿಗೆ ಆದೇಶಿಸಲಾಗಿದ್ದು, ಜಿಲ್ಲಾಧಿಕಾರಿಗೆ ನೋಟಿಸ್ ನೀಡಲು ಸೂಚನೆ ನೀಡಲಾಗಿದೆ ಎಂದರು.

ಅತ್ತಿಬೆಲೆ ಪಟಾಕಿ ಗೋದಾಮು ಅಗ್ನಿ ದುರಂತದಲ್ಲಿ ತಮಿಳುನಾಡಿನ 14 ಜನರು ಸಜೀವ ದಹನವಾಗಿದ್ದರು. ಇದರಿಂದ ಎಚ್ಚೆತ್ತ ರಾಜ್ಯ ಸರ್ಕಾರ ಪಟಾಕಿ ಅಂಗಡಿಗಳ ಲೈಸೆನ್ಸ್ ಮೇಲೆ ತೀವ್ರ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಮಯ್ಯ ಸೂಚನೆ ನೀಡಿದ್ದಾರೆ.

ಪಟಾಕಿ ಮಾರಾಟ ಪರವಾನಗಿ ನಿಯಮದಲ್ಲಿ ಬದಲಾವಣೆ ಮಾಡಲಾಗಿದೆ. ಒಮ್ಮೆ ಪರವಾನಗಿ ಪಡೆದರೆ 5 ವರ್ಷದ ಬಳಿಕ ನವೀಕರಣಕ್ಕೆ ಅವಕಾಶವಿತ್ತು. ಇನ್ಮುಂದೆ ಪ್ರತಿವರ್ಷ ಪಟಾಕಿ ಮಾರಾಟ ಪರವಾನಗಿ ನವೀಕರಣಗೊಳಿಸಬೇಕು. ಆದೇಶ ಪಾಲನೆ ಮಾಡದಿದ್ದರೆ ಕಠಿಣ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ಕೊಟ್ಟಿದ್ದಾರೆ.

RELATED ARTICLES
- Advertisment -
Google search engine

Most Popular