Monday, April 21, 2025
Google search engine

Homeರಾಜ್ಯಸುದ್ದಿಜಾಲಅ.13ರಂದು ಹುಬ್ಬಳ್ಳಿಯಲ್ಲಿ ಲಿಂಗಪೂಜೆ ಮೂಲಕ ಪ್ರತಿಭಟನೆ: ಜಯಮೃತ್ಯುಂಜಯ ಸ್ವಾಮೀಜಿ

ಅ.13ರಂದು ಹುಬ್ಬಳ್ಳಿಯಲ್ಲಿ ಲಿಂಗಪೂಜೆ ಮೂಲಕ ಪ್ರತಿಭಟನೆ: ಜಯಮೃತ್ಯುಂಜಯ ಸ್ವಾಮೀಜಿ

ಹುಬ್ಬಳ್ಳಿ: ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ಧಾರವಾಡ ಜಿಲ್ಲಾ ಘಟಕದ ಆಶ್ರಯದಲ್ಲಿ ಲಿಂಗಾಯತ ಪಂಚಮಸಾಲಿ ೨ಎ ಮೀಸಲಾತಿಗಾಗಿ ಒತ್ತಾಯಿಸಿ ೬ ನೇ ಹಂತದ ಚಳವಳಿಯನ್ನು ಅ. ೧೩ ರಂದು ಬೆಳಗ್ಗೆ ೧೦ಕ್ಕೆ ನಗರದ ಹೊರವಲಯದ ಗಬ್ಬೂರು ಬೈಪಾಸ್ ಪಕ್ಕದ ಮೈದಾನದಲ್ಲಿ ಆಯೋಜನೆ ಮಾಡಲಾಗಿದೆ ಎಂದು ಕೂಡಲಸಂಗಮ ಪೀಠದ ಬಸವಜಯ ಮೃತ್ಯಂಜಯ ಸ್ವಾಮೀಜಿ ತಿಳಿಸಿದರು.

ನಗರದಲ್ಲಿ ಇಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಹೋರಾಟ ಯಾತ್ರೆ ಆರಂಭವಾಗಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ, ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ. ಈಗ ಧಾರವಾಡ ಜಿಲ್ಲೆಯ ಸಮಾವೇಶ ಹುಬ್ಬಳ್ಳಿಯ ಗಬ್ಬೂರು ಬೈಪಾಸ್ ಮೈದಾನದಲ್ಲಿ ಮಾಡಲಾಗುತ್ತದೆ ಎಂದರು.

ಅ. ೧೩ ರಂದು ಚೆನ್ನಮ್ಮ ಮೂರ್ತಿಗೆ ಮಾಲಾರ್ಪಣೆ ಮಾಡಿ ಚಳವಳಿಗೆ ಚಾಲನೆ ನೀಡಲಾಗುವುದು. ನಂತರ ಬಂಕಾಪುರಚೌಕ, ಯಲ್ಲಾಪುರ ಓಣಿ ಮಾರ್ಗವಾಗಿ ಗಬ್ಬೂರು ರಾಷ್ಟ್ರೀಯ ಹೆದ್ದಾರಿಯ ವರೆಗೆ ಪಾದಯಾತ್ರೆ ನಡೆಸಿ, ಧಾರವಾಡ ಜಿಲ್ಲಾ ಮಟ್ಟದ ಸಾಮೂಹಿಕ ಇಷ್ಟಲಿಂಗ ಮಹಾಪೂಜೆಯೊಂದಿಗೆ ರಸ್ತೆ ತಡೆ ನಡೆಸಿ ಹೋರಾಟ ಮಾಡಲಾಗುವುದು” ಎಂದು ಅವರು ಹೇಳಿದರು.

೨ಎ ಮೀಸಲಾತಿ, ಲಿಂಗಾಯತ ಉಪ ಪಂಗಡಗಳಿಗೆ ಕೇಂದ್ರದಿಂದ ಒಬಿಸಿ ದರ್ಜೆ ನೀಡಲು ಮೂರು ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದೆ. ಕಳೆದ ಸರ್ಕಾರ ಕೊನೆಯ ಗಳಿಗೆಯಲ್ಲಿ ಮೀಸಲಾತಿ ಘೋಷಣೆ ಮಾಡಲಾಯಿತು. ಚುನಾವಣೆ ಘೋಷಣೆ, ನೀತಿ ಸಂಹಿತೆಯಿಂದ ಮೀಸಲಾತಿ ಜಾರಿ ಆಗಲಿಲ್ಲ. ಕಾನೂನು ತೊಡಕು ಆಯಿತು. ಈಗಿನ ಸರ್ಕಾರಕ್ಕೆ ಸಹ ನಾವು ಕೇಳ್ತಾ ಇದ್ದೇವೆ, ನಮ್ಮ ಹಕ್ಕು ಕೊಡಿ ಅಂತಾ. ಹೋರಾಟದ ಮೂಲಕ ನಮ್ಮ ಮೀಸಲಾತಿ ಪಡದೇ ತಿರುತ್ತೇವೆ. ಸರ್ಕಾರ ನಮ್ಮನ್ನು ಕರೆದು ಮಾತುಕತೆಗೆ ಕರೆಯಬೇಕು ಎಂದು ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ವೀರೇಶ ಉಂಡಿ, ರಾಜಶೇಖರ ಮೆಣಸಿನಕಾಯಿ ಇದ್ದರು.

RELATED ARTICLES
- Advertisment -
Google search engine

Most Popular