ಮೈಸೂರು: ಮೈಸೂರಿನಲ್ಲಿ ಪ್ರತಾಪ್ ಸಿಂಹ ಹಠಾವ್ ಎಂಬ ಚಳವಳಿ ಮಾಡುತ್ತೇವೆ. ಪ್ರತಾಪ್ ಸಿಂಹ ಒನ್ ಮ್ಯಾನ್ ಶೋ ಕೊಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಗಿರಿಧರ್ ಕಿಡಿಕಾರಿದರು.
ಮೈಸೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ಮುಖಂಡ ಗಿರಿಧರ್, ಚಾಮುಂಡಿ ಬೆಟ್ಟ ಚಲೋ ವಿಚಾರವಾಗಿ ಪಕ್ಷದ ಯಾವುದೇ ಹಿರಿಯರು ಕಾರ್ಯಕರ್ತರ ಹಾಗೂ ಮುಖಂಡರ ಜೊತೆ ಚರ್ಚಿಸದೆ ಏಕಾಂಗಿಯಾಗಿ ತೀರ್ಮಾನ ತೆಗೆದುಕೊಂಡಿದ್ದಾರೆ. ಶಾಸಕ ಶ್ರೀವತ್ಸ ಅವರು ಪ್ರತಾಪ್ ಸಿಂಹ ಅವರ ಒತ್ತಡಕ್ಕೆ ಮಣಿದಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಗೆ ಯಾವುದೇ ಅಭಿವೃದ್ಧಿ ಕೆಲಸಗಳು ಇಲ್ಲದ ಕಾರಣ ಮಹಿಷಾ ದಸರಾ ಮುಂದಿಟ್ಟುಕೊಂಡು ರಾಜಕೀಯ ಮಾಡುತಿದ್ದಾರೆ. ಪ್ರತಾಪ್ ಸಿಂಹರ ಈ ನಡೆ ದಲಿತ ಸಮುದಾಯದ ವಿರೋಧ ವ್ಯಕ್ತಪಡಿಸುತ್ತಿದೆ. ಇದರಿಂದ ಇದು ಮುಂಬರುವ ಚುನಾವಣೆಗೆ ಸಾಕಷ್ಟು ತೊಂದರೆ ಉಂಟಾಗುತ್ತದೆ ಎಂದು ಕಿಡಿಕಾರಿದರು.
ಕಷ್ಟಪಟ್ಟು ಕಟ್ಟಿರುವ ಪಕ್ಷವನ್ನು ಪ್ರತಾಪ್ ಸಿಂಹ ಹಾಳು ಮಾಡುತಿದ್ದಾರೆ. ಒಂದು ವೇಳೆ ಸಂಘರ್ಷವಾಗಿ ಕಾರ್ಯಕರ್ತರಿಗೆ ಏನಾದರೂ ಆದರೆ ಪ್ರತಾಪ್ ಸಿಂಹನೇ ಹೊಣೆ. ಬಿಜೆಪಿ ಎಂದರೆ ಪ್ರತಾಪ್ ಸಿಂಹರದ್ದಾ..? ಪ್ರತಾಪ್ ಸಿಂಹನಿಂದಲೇ ಈ ಬಾರಿ ವಿಧಾನಸಭಾ ಚುನಾವಣೆ ಸೋತಿದ್ದು. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಪ್ರತಾಪ್ ಸಿಂಹಗೆ ಟಿಕೆಟ್ ಕೊಡಬಾರದೆಂದು ಹೈ ಕಮಾಂಡ್ ಗೆ ಪತ್ರ ಬರೆಯುತ್ತೇವೆ ಎಂದು ಪ್ರಶ್ನಿಸಿದರು.
ಸಂವಿಧಾನದಲ್ಲಿ ಅವರವರ ಧಾರ್ಮಿಕ ಆಚರಣೆಗರ ಅವಕಾಶ ಕಲ್ಪಿಸಲಾಗಿದೆ. ಮಹಿಷ ದಸರಾ ನಿಲ್ಲಿಸಬೇಕು ಎಂದು ಸಂಸದ ಪ್ರತಾಪ್ ಸಿಂಹ ಹೇಳಲು ಯಾರು? ಈ ಇದು ಪ್ರತಾಪ್ ಸಿಂಹರ ವೈಯಕ್ತಿ ಹೇಳಿಕೆಯಷ್ಟೆ. ಈ ವಿಚಾರವಾಗಿ ಪಕ್ಷದ ಕೋರ್ ಕಮಿಟಿಯಲ್ಲಿ ತೀರ್ಮಾನವೇ ಆಗಿಲ್ಲ, ಶಾಸಕ ಶ್ರೀವತ್ಸ ಅವರಿಗೂ ಮಹಿಷ ದಸರಾ ವಿರೋಧ ಇಷ್ಟವಿಲ್ಲ, ತಲಹರಟೆ ಪ್ರತಾಪ್ ಸಿಂಹ ಅವರ ಬಲವಂತಕ್ಕೆ ಒಲ್ಲದ ಮನಸ್ಸಿನಿಂದ ಅವರು ವಿರೋಧ ಮಾಡುತ್ತಿದ್ದಾರೆ ಎಂದರು.
ʼʼಪ್ರತಾಪ್ ಸಿಂಹನಿಗೂ ಮೈಸೂರಿಗೂ ಏನು ಸಂಬಂಧ ನಮ್ಮ ಪಕ್ಷ 2014 ರಲ್ಲಿ ಅವರಿಗೆ ಟಿಕೆಟ್ ನೀಡಿತ್ತು ನರೇಂದ್ರ ಮೋದಿ ಪ್ರಧಾನ ಮಂತ್ರಿಯಾಗಲಿ ಎಂದು ಪ್ರತಾಪ್ ಸಿಂಹ ನನ್ನು ಗೆಲ್ಲಿಸಿದರು. ಗೆದ್ದ ನಂತರ ಈತ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಪಕ್ಷಕ್ಕೆ ಮುಜುಗರ ಉಂಟು ಮಾಡುವ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಚಾಮುಂಡಿ ಬೆಟ್ಟವನ್ನು ಈತ ಗುತ್ತಿಗೆ ಪಡೆದಿಲ್ಲ, ಇಲ್ಲಿಗೆ ಎಲ್ಲಾಧರ್ಮದವರು ಹೋಗುತ್ತಾರೆʼʼ ಎಂದು ಹರಿಹಾಯ್ದರು.
ಸಂಸದ ಪ್ರತಾಪ್ ಸಿಂಹ ಈ ಹಿಂದೆ ಮುಸಲ್ಮಾನರ ವಿರುದ್ಧ ಹೇಳಿಕೆಗಳನ್ನು ನೀಡಿ ಪಕ್ಷಕ್ಕೆ ಹಿನ್ನಡೆಯುಂಟು ಮಾಡಿದರು. ಈಗ ದಲಿತರ ವಿರುದ್ಧ ಹೇಳಿಕೆಗಳನ್ನು ನೀಡಿ ಪಕ್ಷಕ್ಕೆ ಮತ್ತಷ್ಟು ಹಿನ್ನಡೆಯುಂಟು ಮಾಡುತ್ತಿದ್ದಾರೆ. ನಮಗೆ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಮಂತ್ರಿಯಾಗಬೇಕು. ಹಾಗಾಗಿ ಇಂತಹ ತಲೆಹರಟೆ ಸಂಸದನನ್ನು ಪಕ್ಷದಿಂದ ದೂರ ಇಡಬೇಕು ಎಂದು ಆಗ್ರಹಿಸಿದರು.
ಹಾಗಾಗಿ ಮಹಿಷ ದಸರಾಗೆ ನಮ್ಮ ಪಕ್ಷದ ಸಂಪೂರ್ಣ ಬೆಂಬಲ ಇದೆ. ಪ್ರತಾಪ್ ಸಿಂಹ ಐದು ಸಾವಿರ ಜನ ಸೇರುತ್ತಾರೆ ಎಂದಾಕ್ಷಣ ಬಿಜೆಪಿ ಪಕ್ಷದ ಕಾರ್ಯಕರ್ತರು ಯಾರೂ ಬರುವುದಿಲ್ಲ. ಕೂಡಲೇ ಜಿಲ್ಲಾಡಳಿತ ಮಹಿಷ ದಸರಾಗೆ ಅನುಮತಿ ನೀಡಬೇಕು ಎಂದು ಒತ್ತಾಯಿಸಿದರು.