Monday, April 21, 2025
Google search engine

Homeರಾಜ್ಯಸುದ್ದಿಜಾಲಅಖಿಲ ಭಾರತ ನಾಗರಿಕ ಸೇವಾ ಕ್ರೀಡಾಕೂಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿಯವರಿಂದ ಸನ್ಮಾನ

ಅಖಿಲ ಭಾರತ ನಾಗರಿಕ ಸೇವಾ ಕ್ರೀಡಾಕೂಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿಯವರಿಂದ ಸನ್ಮಾನ

ಚಾಮರಾಜನಗರ: ದೆಹಲಿಯಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ಅಖಲಿ ಭಾರತ ನಾಗರಿಕ ಸೇವಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ಜಿಲ್ಲೆಯ ಮೂವರು ಕ್ರೀಡಾಪಟುಗಳನ್ನು ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸಲಾಯಿತು.

ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಹಾಗೂ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಚಂದ್ರಶೇಖರ್ ಅವರು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವ ಕ್ರೀಡಾಪಟುಗಳಾದ ಮಂಜುನಾಥ್ ಯಲವೇಲಿ (ಕುಸ್ತಿ), ಪ್ರವೀಣ್ (ವೈಟ್ ಲಿಫ್ಟಿಂಗ್) ಹಾಗೂ ನಂದಿನಿ (ಕಬ್ಬಡ್ಡಿ) ಅವರನ್ನು ಸನ್ಮಾನಿಸಿ ಗೌರವಿಸಿದರು.

ದೆಹಲಿಯ ತ್ಯಾಗರಾಜ ಸ್ಟೇಡಿಯಂ ನಲ್ಲಿ ನಡೆಯುವ ರಾಜ್ಯ ಸರ್ಕಾರಿ ನೌಕರರ ಅಖಿಲ ಭಾರತ ನಾಗರಿಕ ಸೇವಾ ಕ್ರೀಡಾಕೂಟಕ್ಕೆ ಚಾಮರಾಜನಗರ ಜಿಲ್ಲೆಯಿಂದ ಆಯ್ಕೆಯಾಗಿ ಕರ್ನಾಟಕವನ್ನು ಪ್ರತಿನಿಧಿಸುತ್ತಿರುವ ಜಿಲ್ಲೆಯ ಕ್ರೀಡಾಪಟುಗಳಿಗೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ಟ್ರ್ಯಾಕ್ ಸೂಟ್ ನೀಡಲಾಯಿತು.

RELATED ARTICLES
- Advertisment -
Google search engine

Most Popular