ಮೈಸೂರು: ಕೆಎಸ್’ಆರ್’ಟಿಸಿ – ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬಸ್‌ನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ಮೈಸೂರು ಬೆಂಗಳೂರು ರಸ್ತೆಯ ರಿಂಗ್ ರಸ್ತೆ ಬಳಿ ನಡೆದಿದೆ.
ಅಪಘಾತದಲ್ಲಿ ಖಾಸಗಿ ಬಸ್ ಮುಂಬಾಗ ಜಖಂ ಆಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ.
ದಸರಾ ವಿದ್ಯುತ್ ದೀಪಾಲಂಕಾರದ ಕಂಬ ಧರೆಗುರುಳಿದ ಪರಿಣಾಮ ಮೈಸೂರು-ಬೆಂಗಳೂರು ಸಂಚಾರ ಬಂದ್ ಆಗಿದ್ದು, ಸ್ಥಳಕ್ಕೆ ನರಸಿಂಹರಾಜ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.