Monday, April 21, 2025
Google search engine

Homeರಾಜ್ಯಸುದ್ದಿಜಾಲಶ್ರೀ ಮಹರ್ಷಿ ವಾಲ್ಮಿಕಿ ಜಯಂತಿ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ : ಶಿವಾನಂದ ಮೂರ್ತಿ

ಶ್ರೀ ಮಹರ್ಷಿ ವಾಲ್ಮಿಕಿ ಜಯಂತಿ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ : ಶಿವಾನಂದ ಮೂರ್ತಿ

ರಾಮನಗರ: ರಾಮನಗರ ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅ. ೨೮ರಂದು ಶ್ರೀ ಮಹರ್ಷಿ ವಾಲ್ಮಿಕಿ ಜಯಂತಿ ಆಚರಣೆಗೆ ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶ್ರೀ ಮಹರ್ಷಿ ವಾಲ್ಮಿಕಿ ಜಯಂತಿ ಆಚರಣೆ ಕುರಿತು ಆಯೋಜಿಸಲಾಗಿದ್ದ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶ್ರೀ ಮಹರ್ಷಿ ವಾಲ್ಮಿಕಿ ಜಯಂತಿ ಆಚರಣೆಯ ವೇದಿಕೆ ಕಾರ್ಯಕ್ರಮವನ್ನು ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ ನಗರದ ಜಿಲ್ಲಾ ಕ್ರೀಡಾಂಗಣದಿಂದ ಅಂಬೇಡ್ಕರ್ ಭವನದವರೆಗೆ ಕಲಾ ಪ್ರದರ್ಶನದೊಂದಿಗೆ ಮೆರವಣಿಗೆ ಕಾರ್ಯಕ್ರಮವನ್ನು ಸಹ ಆಯೋಜಿಸಲಾಗಿದೆ ಎಂದರು.

ಕಾರ್ಯಕ್ರಮದ ಸಿದ್ದತೆ ಕುರಿತು ವೇದಿಕೆ, ಶಾಮಿಯಾನ, ಆಸನ ವ್ಯವಸ್ಥೆ ಕುರಿತಂತೆ ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು. ಕಾರ್ಯಕ್ರಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು ಹಾಗೂ ಆಯಾ ಇಲಾಖೆಗಳಿಗೆ ವಹಿಸಿಕೊಟ್ಟ ಕಾರ್ಯಕ್ರಮದ ಜವಾಬ್ದಾರಿಗಳನ್ನು ಬಹಳ ಅಚ್ಚುಕಟ್ಟಾಗಿ ಯಶಸ್ವಿಯಾಗಿ ನೆರವೇರಿಸಬೇಕು ಎಂದು ತಿಳಿಸಿದರು. ಅ. ೨೮ರಂದು ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು, ಗ್ರಾಮ ಪಂಚಾಯಿತಿಗಳಲ್ಲಿ ಕಡ್ಡಾಯವಾಗಿ ಶ್ರೀ ಮಹರ್ಷಿ ವಾಲ್ಮಿಕಿ ಜಯಂತಿಯನ್ನು ಆಚರಿಸುವಂತೆ ತಿಳಿಸಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಶಾಂತಿಪ್ರಿಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಮುದಾಯದ ಮುಖಂಡರುಗಳಾದ ಕೃಷ್ಣಪ್ಪ, ವಾಸು, ಕೃಷ್ಣಮೂರ್ತಿ, ರಮೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular