Wednesday, January 14, 2026
Google search engine

Homeರಾಜ್ಯದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿ: ವಿದ್ಯಾರ್ಥಿ ಸಾವು

ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿ: ವಿದ್ಯಾರ್ಥಿ ಸಾವು

ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಇಂಜಿನಿಯರ್ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಯಶವಂತಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ನಡೆದಿದೆ.

ಗಂಗಾಧರ್ (21) ಮೃತ ದುರ್ದೈವಿ.

ಹೆಚ್​ಎಎಲ್ ​ಗೆ ಇಂಟರ್ನಿಶಿಫ್ ಸರ್ಟಿಫಿಕೇಟ್ ತರಲು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಗಂಗಾಧರ್​ ಗೆ ಯಶವಂತಪುರ ಗಾರೆಪ್ಪನ ಪಾಳ್ಯ ರಸ್ತೆ ಮಾರ್ಗವಾಗಿ ಹೋಗುತ್ತಿದ್ದ ಬಿಎಂಟಿಸಿ ಬಸ್ ಹೂವಿನ ಮಾರ್ಕೆಟ್ ಸಮೀಪ ಹಿಂಬಂದಿಯಿಂದ ಡಿಕ್ಕಿ ಹೊಡೆದಿದೆ. ಈ ವೇಳೆ ಹಿಂಬದಿ ಚಕ್ರ ಹರಿದು ಗಂಗಾಧರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆ ಸಂಬಂಧ ಸ್ಥಳಕ್ಕೆ ಆಗಮಿಸಿದ ಯಶವಂತಪುರ ಸಂಚಾರ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದು, ಅಪಘಾತ ಎಸಗಿದ್ದ ಬಿಎಂಟಿಸಿ ಬಸ್ ಚಾಲಕನಿಗೆ ಠಾಣೆಗೆ ಬರುವಂತೆ ಸೂಚನೆ ನೀಡಿದ್ದಾರೆ.

ವಿದ್ಯಾರ್ಥಿ ಮೃತದೇಹ ಮರಣೋತ್ತರ ಪರೀಕ್ಷೆಗೆ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ.

RELATED ARTICLES
- Advertisment -
Google search engine

Most Popular