ಮೈಸೂರು: ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರು ಪೀಠದ ವತಿಯಿಂದ ಮೈಸೂರಿನ ಸಿದ್ದಾರ್ಥನಗರದಲ್ಲಿರುವ ಕನಕ ಭವನದಲ್ಲಿ ಅ. ೧೬ ರಂದು ೩ ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಮಾಜದ ನೂತನ ಶಾಸಕರಿಗೆ ಅಭಿನಂದನಾ ಸಮಾರಂಭವನ್ನು ಏರ್ಪಡಿಸಲಾಗಿದೆ ಎಂದು ಮೈಸೂರು ಕಾಗಿನೆಲೆ ಕನಕ ಗುರುಪೀಠದ ಶ್ರೀಗಳಾದ ಶ್ರೀ ಶಿವಾನಂದಪುರಿ ಮಹಾಸ್ವಾಮೀಜಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯರವರು ೨ನೇ ಬಾರಿಗೆ ಮುಖ್ಯಮಂತ್ರಿಯಾಗಿರುವುದು ನಮ್ಮ ಸಮಾಜಕ್ಕೆ ಹಾಗೂ ಹಿಂದುಳಿದ ವರ್ಗದ ಜನರಿಗೆ ಸಂತೋಷವಾಗಿದ್ದು, ಈ ನಿಟ್ಟಿನಲ್ಲಿ ಅವರಿಗೆ ಅಭಿನಂದನೆ ಮಾಡುತ್ತಿದ್ದೇವೆ. ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ಶ್ರೀ ಕಾಗಿನೆಲೆ ಕನಕ ಗುರುಪೀಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮೀಜಿ ವಹಿಸಿಕೊಂಡು ಆಶೀರ್ವದಿಸಲಿದ್ದಾರೆ. ಜಿಲ್ಲಾ ಉಸ್ತುವಾಗಿ ಸಚಿವರುಗಳು, ಶಾಸಕರುಗಳು, ಮುಖಂಡರುಗಳು ಭಾಗವಹಿಸಲಿದ್ದಾರೆ. ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಬಂದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.