Monday, April 21, 2025
Google search engine

Homeರಾಜ್ಯಸುದ್ದಿಜಾಲಅ.೧೬ರಂದು ಕಾಗಿನೆಲೆ ಮಹಾ ಸಂಸ್ಥಾನ ಕನಕಗುರು ಪೀಠ ಶಾಖಾ ಮಠದ ವತಿಯಿಂದ ಸನ್ಮಾನ ಸಮಾರಂಭ

ಅ.೧೬ರಂದು ಕಾಗಿನೆಲೆ ಮಹಾ ಸಂಸ್ಥಾನ ಕನಕಗುರು ಪೀಠ ಶಾಖಾ ಮಠದ ವತಿಯಿಂದ ಸನ್ಮಾನ ಸಮಾರಂಭ

ಕೆ.ಆರ್.ನಗರ: ಕಾಗಿನೆಲೆ ಮಹಾ ಸಂಸ್ಥಾನ ಕನಕಗುರು ಪೀಠ ಕೆ.ಆರ್.ನಗರ ಶಾಖಾ ಮಠದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೇರಿದಂತೆ ಈ ಭಾಗದ ಶಾಸಕರುಗಳಿಗೆ ಸನ್ಮಾನ ಮತ್ತು ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಮೈಸೂರು ಸಿದ್ದಾರ್ಥ ನಗರದ ಮಠದ ಆವರಣದಲ್ಲಿ ಏರ್ಪಡಿಸಲಾಗಿದೆ ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.
ಕೆ.ಆರ್.ನಗರದ ಗುರುಪೀಠದಲ್ಲಿ ನಡೆದ ಸಮುದಾಯದ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅ.೧೬ರಂದು ಸೋಮವಾರ ಮಧ್ಯಾಹ್ನ ೩ಕ್ಕೆ ಸನ್ಮಾನ ಸಮಾರಂಭ ನಡೆಯಲಿದ್ದು ಮುಖ್ಯಮಂತ್ರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರುಗಳಾದ ಡಾ.ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್ ಸೇರಿದಂತೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಶಾಸಕರುಗಳಿಗೆ ಮಠದ ವತಿಯಿಂದ ಗೌರವ ಸಮರ್ಪಣೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಅ.೧೫ರಂದು ಉಚಿತ ಕಣ್ಣಿನ ತಪಾಸಣೆ ಶಿಬಿರ ಸೇರಿದಂತೆ ಇತರ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು ಭಾನುವಾರ ಬೆಳಗ್ಗೆ ೧೦ಕ್ಕೆ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳು ಚಾಲನೆ ನೀಡಲಿದ್ದಾರೆ ಎಂದು ಹೇಳಿದ ಶಾಸಕರು ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಕಾಗಿನೆಲೆ ಮಠದ ನಿರಂಜನಾನoದಪುರಿಸ್ವಾಮಿಜಿ ದಿವ್ಯ ಸಾನಿದ್ಯ ವಹಿಸಲಿದ್ದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಕೆ.ಆರ್.ನಗರದ ಗುರುಪೀಠದಲ್ಲಿ ೨೦ನೇ ವರ್ಷದ ದಸರಾ ಮಹೋತ್ಸವ ಮತ್ತು ಚಾಮುಂಡೇಶ್ವರಿ ಪೂಜೆ ೧೦ ದಿನಗಳ ಕಾಲ ನಡೆಯಲಿದ್ದು ಮಠದ ವತಿಯಿಂದ ವಿವಿಧ ಸಾಂಸ್ಕೃತಿಕ ಮತ್ತು ಮನರಂಜನಾ ಕಾರ್ಯಕ್ರಮವನ್ನು ನಡೆಸಲಾಗುತ್ತದೆ ಜತೆಗೆ ಈ ಭಾಗದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಚುನಾಯಿತ ಸದಸ್ಯರಿಗೆ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದ್ದು ಮಠದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಮನವಿ ಮಾಡಿದರು.
ವಿಭಾಗೀಯ ಮಠಾಧ್ಯಕ್ಷರ ಶ್ರೀ ಶಿವಾನಂದಪುರಿಸ್ವಾಮೀಜಿಗಳು ಕಳೆದ ೧೯ ವರ್ಷಗಳಿಂದ ದಸರಾ ಮಹೋತ್ಸವ ನಡೆಸುವುದರ ಜತೆಗೆ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ ಸ್ವಾಮೀಜಿಗಳಿಗೆ ತಾಲೂಕು ಕುರುಬರ ಸಂಘ ಎಲ್ಲಾ ರೀತಿಯ ಸಹಕಾರ ನೀಡಬೇಕು ಎಂದು ಕೋರಿದರು. ಈ ಸಂದರ್ಭದಲ್ಲಿ ಶಿವಾನಂದಪುರಿಸ್ವಾಮೀಜಿ, ಕುರುಬರ ಸಂಘದ ಅಧ್ಯಕ್ಷ ಚರ‍್ನಹಳ್ಳಿಶಿವಣ್ಣ ಮಾತನಾಡಿದರು.
ಮೈಸೂರು ಮತ್ತು ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಆಕಾಂಕ್ಷಿ ಜೆ.ಜೆ.ಆನಂದ್, ಪುರಸಭೆ ಸದಸ್ಯರಾದ ಕೋಳಿಪ್ರಕಾಶ್, ನಟರಾಜು, ನಿವೃತ್ತ ಡಿಹೆಚ್‌ಒ ಡಾ.ಎಸ್.ಎಂ.ಮಾಲೇಗೌಡ, ಜಿ.ಪಂ. ಮಾಜಿ ಸದಸ್ಯರಾದ ಜಿ.ಆರ್.ರಾಮೇಗೌಡ, ಮಾರ್ಚಹಳ್ಳಿಶಿವರಾಮು, ಟಿಎಪಿಸಿಎಂಎಸ್ ನಿರ್ದೇಶಕ ಎಸ್.ಸಿದ್ದೇಗೌಡ, ಕುರುಬರ ಸಂಘದ ಉಪಾಧ್ಯಕ್ಷ ಕೆ.ಎಂ.ಶ್ರೀನಿವಾಸ್, ಖಜಾಂಚಿ ಬಿ.ಎಂ.ಗಿರೀಶ್, ನಿರ್ದೇಶಕರಾದ ಕೃಷ್ಣೇಗೌಡ, ರಾಜಶೇಖರ್, ಮಾನವ ಹಕ್ಕು ಆಯೋಗದ ತಾಲೂಕು ಅಧ್ಯಕ್ಷ ಪಿ.ಮಹದೇವ್ ಮತ್ತಿತರ ಮುಖಂಡರು ಹಾಜರಿದ್ದರು.

RELATED ARTICLES
- Advertisment -
Google search engine

Most Popular