ಮಂಡ್ಯ: ಇಂಧನ ಸಚಿವರು ಕಾಣೆಯಾಗಿದ್ದಾರೆ.! ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಪೋಸ್ಟರ್ ಹಿಡಿದು ಮಂಡ್ಯದ ಸಂಜಯ್ ವೃತ್ತದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು.
‘ಕಾಣೆಯಾಗಿದ್ದರೆ ಇಂಧನ ಸಚಿವ ಕೆ.ಜೆ.ಜಾರ್ಜ್’, ‘ಇಂಧನ ಸಚಿವರನ್ನ ಹುಡುಕಿಕೊಟ್ಟವರಿಗೆ ಉಚಿತ ವಿದ್ಯುತ್’ ಎಂಬ ಪೋಸ್ಟರ್ ಹಿಡಿದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ.
ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ ನಡೆಸುತ್ತಿದೆ. ರಾಜ್ಯದ ಜನರನ್ನು ಕತ್ತಲ್ಲ ಭಾಗ್ಯ ಕೊಟ್ಟು ಕತ್ತಲಿಗೆ ದೂಡಿದ್ದಾರೆ ಎಂದು ಆರೋಪಿಸಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ಒಕ್ಕಲಿಗರ ಬಗ್ಗೆ ಪ್ರೋ.ಭಗವಾನ್ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಭಗವಾನ್ ವಿರುದ್ಧ ಕ್ರಮ ಕೈಗೊಳ್ಳಬೇಕು. ಕಾಂಗ್ರೆಸ್ ಸರ್ಕಾರದಿಂದ ಒಕ್ಕಲಿಗ ಸಮುದಾಯಕ್ಕೆ ಅನ್ಯಾಯ ಆಗುತ್ತಿದೆ. ಕಾಂಗ್ರೆಸ್ ಸರ್ಕಾರ ತೊಲಗಲಿ ಜನರಿಗೆ ತುಂಬಾ ಅನ್ಯಾಯ ಆಗಿದೆ. ಕರೆಂಟ್ ಕೊಡದೆ ರೈತರಿಗೆ ಅನ್ಯಾಯ ಮಾಡ್ತಿದ್ದಾರೆ. ತಕ್ಷಣವೇ ಭ್ರಷ್ಟಾಚಾರ ನಡೆಸುವ ಕಾಂಗ್ರೆಸ್ ಸರ್ಕಾರ ತೆಗೆಯುವಂತೆ ಆಗ್ರಹ. ಬೇರೆ ರಾಜ್ಯದ ಚುನಾವಣೆಗೆ ಕರ್ನಾಟಕದ ಸಂಪತ್ತನ್ನ ಲೂಟಿ ಮಾಡ್ತಿದ್ದಾರೆ. ಉಚಿತ ವಿದ್ಯುತ್ ಅಂತ ಹೇಳಿ ಕರೆಂಟ್ ಕಟ್ ಮಾಡ್ತಿದ್ದಾರೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡ ಅಶೋಕ್ ಜಯರಾಂ, ಸಿದ್ದರಾಮಯ್ಯ, ಅರವೀಂದ್, ಮಂಜು, ಸೇರಿದಂತೆ ಹಲವರು ಭಾಗಿಯಾಗಿದ್ದರು.