ಮಂಡ್ಯ: ಒಕ್ಕಲಿಗರ ಬಗ್ಗೆ ಪ್ರೊ.ಭಗವಾನ್ ಅವಹೇಳನಕಾರಿ ಹೇಳಿಕೆ ಖಂಡಿಸಿ ಮಂಡ್ಯದ ಸಂಜಯ್ ವೃತ್ತದ ರೈತ ಸಭಾಂಗಣದ ಕುವೆಂಪು ಪ್ರತಿಮೆ ಬಳಿ ರಾಜ್ಯ ಒಕ್ಕಲಿಗರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಅಶೋಕ್ ಜಯರಾಂ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಭಗವಾನ್ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು.
ಒಕ್ಕಲಿಗರ ಬಗ್ಗೆ ಭಗವಾನ್ ಬಗ್ಗೆ ಹೇಳಿಕೆ ನೀಡಿರುವುದು ಖಂಡನಿಯ. ತಕ್ಷಣವೇ ಭಗವಾನ್ ರನ್ನ ಬಂಧಿಸಿ ಕ್ರಮ ಕೈಗೊಳ್ಳಲು ಪ್ರತಿಭಟನಾಕಾರರು ಆಗ್ರಹಿಸಿದರು.