Monday, April 21, 2025
Google search engine

Homeರಾಜ್ಯಸುದ್ದಿಜಾಲಗುತ್ತಿಗೆದಾರರ ನಿವಾಸದಲ್ಲಿ ಕೋಟಿ ಕೋಟಿ ಹಣ ಪತ್ತೆ ಕೇಸ್ ಇಡಿಗೆ ವಹಿಸಿ: ಬಿ.ಎಸ್ ಯಡಿಯೂರಪ್ಪ ಆಗ್ರಹ

ಗುತ್ತಿಗೆದಾರರ ನಿವಾಸದಲ್ಲಿ ಕೋಟಿ ಕೋಟಿ ಹಣ ಪತ್ತೆ ಕೇಸ್ ಇಡಿಗೆ ವಹಿಸಿ: ಬಿ.ಎಸ್ ಯಡಿಯೂರಪ್ಪ ಆಗ್ರಹ

ಬೆಂಗಳೂರು: ಗುತ್ತಿಗೆದಾರರ ನಿವಾಸದಲ್ಲಿ ಪತ್ತೆಯಾದ ಕೋಟಿ ಕೋಟಿ ನಗದು ಹಣ ಪ್ರಕರಣವನ್ನು ಇಡಿ ಮತ್ತು ಸಿಬಿಐ ತನಿಖೆಗೆ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆಗ್ರಹಿಸಿದ್ದಾರೆ. ಡಾಲರ್ಸ್ ಕಾಲೊನಿಯಲ್ಲಿರುವ ಖಾಸಗಿ ನಿವಾಸ ದವಳಗಿರಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಐಟಿ ದಾಳಿಯಲ್ಲಿ ಹಣ ಸಿಕ್ಕಿದ್ದ ಪ್ರಕರಣದಲ್ಲಿ ತನಿಖೆ ಬಳಿಕ ಹಣದ ಮೂಲ ಗೊತ್ತಾಗಲಿದೆ. ಚುನಾವಣೆಗೆ ಹಣ ಸಂಗ್ರಹ ಮಾಡಿರೋದು ನಿಜ ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಆರೋಪಿಸಿದ್ದಾರೆ. ಕಾಂಗ್ರೆಸ್ ನವರು ಚುನಾವಣೆಗೆ ಹಣ ಸಂಗ್ರಹ ಮಾಡುವ ಕೆಲಸಕ್ಕೆ ಮುಂದಾಗಿದ್ದಾರೆ. ಇಡಿ ಮತ್ತು ಸಿಬಿಐ ತನಿಖೆ ಮಾಡಿದರೆ ವಾಸ್ತವಾಂಶ ಹೊರಗೆ ಬರಲಿದೆ. ಹಾಗಾಗಿ ನಾನೂ ಕೂಡ ಇಡಿ ತನಿಖೆಗೆ ಆಗ್ರಹ ಮಾಡುತ್ತೇನೆ ಎಂದರು.

ವಿದ್ಯುತ್ ದರ ಹೆಚ್ಚಿಸಿ ಏನು ಮಾಡುತ್ತಾರೆ. ಇಷ್ಟಾದರೂ ಸರ್ಕಾರಕ್ಕೆ ಬುದ್ಧಿ ಬಂದಿಲ್ಲ. ಮತ್ತೆ ವಿದ್ಯುತ್ ದರ ಹೆಚ್ಚಳ ಮಾಡುವ ಮೂಲಕ ರೈತರಿಗೆ, ಜನ ಸಾಮಾನ್ಯರಿಗೆ ಸಮಸ್ಯೆ ಮಾಡುತ್ತಿದ್ದಾರೆ. ಪ್ರಾರಂಭದಲ್ಲಿ ಅನೇಕ ಕಾರ್ಯಕ್ರಮ ಘೋಷಣೆ ಮಾಡಿ ಒಂದೊಂದೇ ಬರೆ ಎಳೆಯುವ ಕೆಲಸ ಮಾಡುತ್ತಿದೆ. ಪ್ರಾರಂಭದಲ್ಲಿ ಉಚಿತ ಯೋಜನೆ ಘೋಷಣೆ ಮಾಡಿ ಈಗ ಬೇರೆ ಬೇರೆ ರೀತಿ ಸುಲಿಗೆ ಮಾಡಿ ಹಣ ವಸೂಲಿ ಮಾಡುತ್ತಿದೆ. ಇದು ಖಂಡನೀಯ. ಇದನ್ನು ಖಂಡಿಸುತ್ತೇನೆ. ವಿದ್ಯುತ್ ದರ ಹೆಚ್ಚಳ ಮಾಡದೇ ವಾಪಸ್ ಪಡೆಯಬೇಕು ಎಂದರು.

ಭೀಕರ ಬರಗಾಲ ಅಂತ ಯಾವುದೇ ಕಾಮಗಾರಿ ನಡೆಯುತ್ತಿಲ್ಲ. ಸರ್ಕಾರ ಗ್ಯಾರಂಟಿ ಯೋಜನೆ ಘೋಷಣೆ ಮಾಡಿ ಒಂದು ರೀತಿ ದಿವಾಳಿಗೆ ಬಂದಿದೆ. ಯಾವುದೇ ಅಭಿವೃದ್ಧಿ ಕಾರ್ಯಕ್ಕೆ ಹಣ ಬಿಡುಗಡೆ ಮಾಡಿಲ್ಲ. ಈಗಲಾದರೂ ಆದ್ಯತೆ ಮೇಲೆ ಹಣ ಬಿಡುಗಡೆ ಮಾಡಬೇಕು. ಎಲ್ಲಾ ಕೆಲಸ ನಿಂತಿದ್ದು, ಕಾಮಗಾರಿ ಪ್ರಾರಂಭ ಮಾಡಬೇಕು ಎಂದು ಆಗ್ರಹಿಸಿದರು.

RELATED ARTICLES
- Advertisment -
Google search engine

Most Popular