ಮಂಡ್ಯ: ಒಕ್ಕಲಿಗರ ಬಗ್ಗೆ ಭಗವಾನ್ ಅವಹೇಳನಕಾರಿ ಹೇಳಿಕೆ ಹಿನ್ನಲೆ ಪ್ರೊ.ಭಗವಾನ್ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಮದ್ದೂರಿನ ಟಿಬಿ ವೃತ್ತದಲ್ಲಿ ಬೆಂ-ಮೈ ಹೆದ್ದಾರಿ ತಡೆದು ಮದ್ದೂರು ತಾಲ್ಲೂಕು ಬಿಜೆಪಿ ಘಟಕದಿಂದ ಪ್ರತಿಭಟನೆ ನಡೆಸಲಾಗಿದೆ.
ಭಗವಾನ್ ಹಾಗೂ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.

ರಾಜ್ಯ ಸರ್ಕಾರ ಭ್ರಷ್ಟ, ಎಟಿಎಂ ಸರ್ಕಾರವಾಗಿದೆ. ಭ್ರಷ್ಟಾಚಾರ ನಡೆಸುವ ಮೂಲಕ ಜನರಿಗೆ ಅನ್ಯಾಯ ಮಾಡ್ತಿದೆ. ಸುಳ್ಳು ಗ್ಯಾರಂಟಿ ಕೊಟ್ಟು ರಾಜ್ಯದ ಸಂಪತ್ತನ್ನು ಲೂಟಿ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಇದೇ ವೇಳೆ ಪ್ರೋ.ಭಗವಾನ್ ಭಾವಚಿತ್ರಕ್ಕೆ ಚಪ್ಪಲಿಯಲ್ಲಿ ಹೊಡೆದು ಆಕ್ರೋಶ ಹೊರ ಹಾಕಿದ್ದು, ತಕ್ಷಣವೇ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ.