ಹಾಸನ: ದೇವೇಗೌಡರ ಅಂಗಳದಲ್ಲಿ ಚೆಂಡು ಇದೆ. ಅವರು ರಾಷ್ಟ್ರೀಯ ಅಧ್ಯಕ್ಷರಿದ್ದಾರೆ, ಹೀಗಾಗಿ ಅವರು ತೀರ್ಮಾನ ಮಾಡುತ್ತಾರೆ. ಸಿಎಂ ಇಬ್ರಾಹಿಂ ಕಾಂಗ್ರೆಸ್ ಹೋಗುವುದಾದರೆ ಹೋಗಲಿ. ಸಂತೋಷ, ನಮ್ಮದೇನು ಅಭ್ಯಂತರವಿಲ್ಲ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಹೇಳಿದರು.
ಹಾಸನದ ಸಂಸದರ ನಿವಾಸದಲ್ಲಿ ಮಾತನಾಡಿದ ಅವರು, ಸಿಎಂ ಇಬ್ರಾಹಿಂ ಮಾತನಾಡಿರುವುದರ ಹಿಂದೆ ಕಾಂಗ್ರೆಸ್ ಕುತಂತ್ರವಿದೆ ಎಂದ ಅವರು, ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಅವರನ್ನು ಉಚ್ಛಾಟನೆ ಮಾಡುವುದಾಗಿ ಪಕ್ಷ ತೀರ್ಮಾನಿಸಿದೆ ಎಂಬ ಸಿಎಂ ಇಬ್ರಾಹಿಂ ಹೇಳಿಕೆಗೆ ತಿರುಗೇಟು ನೀಡಿದರು.
ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದಕ್ಕೆ, ಬೇಸರಗೊಂಡ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ತಮ್ಮ ಬೆಂಬಲಿಗರ ಮತ್ತು ಕಾರ್ಯಕರ್ತರ ಜೊತೆಗೆ ಸಭೆ ನಡೆಸಿ, ಸಭೆಯಲ್ಲಿ ನಮ್ಮದೆ ಓರಿಜಿನಲ್ ಜೆಡಿಎಸ್ ಹೆಂಗಿದ್ದಾರೆ ಅದನ್ನು ಮಾಜಿ ಪ್ರಧಾನಿ ದೇವೇಗೌಡರೇ ಕೂತು ಬಗೆಹರಿಸುತ್ತಾರೆ. ಇಂತಹ ಮಾತಿಗೆಲ್ಲ ತಲೆಕೆಡಿಸಿಕೊಳ್ಳುವುದು ಬೇಡ. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಯಾರನ್ನು ಉಚ್ಛಾಟನೆ ಮಾಡ್ತಾರೆ, ಏನು ತೀರ್ಮಾನ ಮಾಡುತ್ತಾರೆ ನೋಡೋಣ ಎಂದು ಗುಡುಗಿದರು.