ಪಿರಿಯಾಪಟ್ಟಣ:೨೦೨೩-೨೪ ನೇ ಸಾಲಿನಲ್ಲಿ ಪಿರಿಯಾಪಟ್ಟಣ ತಾಲೂಕಿನ ತೋಟಗಾರಿಕಾ ಇಲಾಖೆ ವತಿಯಿಂದ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ೭೫ ಸಾವಿರ ತೆಂಗು ಪ್ರದೇಶ ವಿಸ್ತರಣೆ ಮಾಡಲು ತೆಂಗು ಬೆಳೆಯಲು ಆಸಕ್ತಿ ಹಾಗೂ ನೀರಾವರಿ ಸೌಲಭ್ಯ ಹೊಂದಿರುವ ರೈತರು ತೋಟಗಾರಿಕೆ ಇಲಾಖೆ ವತಿಯಿಂದ ಅರ್ಜಿ ಆಹ್ವಾನಿಸಲಾಗಿದ್ದು, ರೈತರಿಗೆ ಉಚಿತವಾಗಿ ತೆಂಗಿನ ಗಿಡಗಳನ್ನು ವಿತರಿಸಲಾಗುವುದು. ಆಸಕ್ತಿ ಹೊಂದಿರುವ ರೈತರು ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ನೊಂದಿದೆ ಅರ್ಜಿಯನ್ನು ಸಲ್ಲಿಸಲು ಕೋರಿದ್ದಾರೆ ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆ ಪಿರಿಯಾಪಟ್ಟಣ ಇವರನ್ನು ಸಂಪರ್ಕಿಸಬೇಕಾಗಿ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ತಿಳಿಸಿದ್ದಾರೆ.