Monday, April 21, 2025
Google search engine

Homeರಾಜ್ಯದಸರಾ ಅಲಂಕಾರ: ಅಕ್ರಮ ವಿದ್ಯುತ್ ಸಂಪರ್ಕ ಪಡೆದರೆ ಕಾನೂನು ಕ್ರಮದ ಎಚ್ಚರಿಕೆ

ದಸರಾ ಅಲಂಕಾರ: ಅಕ್ರಮ ವಿದ್ಯುತ್ ಸಂಪರ್ಕ ಪಡೆದರೆ ಕಾನೂನು ಕ್ರಮದ ಎಚ್ಚರಿಕೆ

ಮಂಗಳೂರು(ದಕ್ಷಿಣ ಕನ್ನಡ): ದಸರಾ ಹಬ್ಬದ ಪ್ರಯುಕ್ತ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮುಖ್ಯ ರಸ್ತೆಗಳಲ್ಲಿ ಅಲಂಕಾರಿಕ ವಿದ್ಯುತ್ ದೀಪಗಳನ್ನು ಆಳವಡಿಸಲಾಗಿದೆ.

ಹಲವಾರು ಸ್ಥಳಗಳಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಸಂಘ ಸಂಸ್ಥೆಗಳು ತಮ್ಮ ಅನಧಿಕೃತ ಫ್ಲೆಕ್ಸ್ ಮತ್ತು ಬಾನರ್ ಗಳನ್ನು ಆಳವಡಿಸಿದ್ದು, ಫ್ಲೆಕ್ಸ್ ಮತ್ತು ಬ್ಯಾನರ್ ಗಳಿಗೆ ಅಲಂಕಾರಿಕ ದೀಪಗಳು ಆಳವಡಿಸಲು ಪಾಲಿಕೆಯಿಂದ ಆಳವಡಿಸಿರುವ ಕಂಬ ಮತ್ತು ವಿದ್ಯುತ್ ದೀಪಗಳ ಸಂಪರ್ಕದಿಂದ ಅತಿಕ್ರಮಣವಾಗಿ ವಿದ್ಯುತ್ ಸಂಪರ್ಕ ಪಡೆದಿರುವುದು ಕಂಡುಬಂದಿದೆ.

ಇಂತಹ ಅತಿಕ್ರಮಣ ಸಂಪರ್ಕಗಳಿಗೆ ಕಾನೂನು ಕ್ರಮ ಕೈಗೊಂಡು ದಂಡ ವಿಧಿಸಲಾಗುವುದು ಹಾಗೂ ಯಾವುದೇ ರೀತಿ ಅವಘಡಗಳು ಸಂಭವಿಸಿದರೆ ನೇರ ಹೊಣೆಗಾರನಾಗಿ ಮಾಡಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular