ಬೆಂಗಳೂರು: ಪ್ರಸಕ್ತ ಸಾಲಿನ ಐಸಿಸಿ ಏಕದಿನ ವಿಶ್ವಕಪ್‌ನ ೧೮ನೇ ಪಂದ್ಯಕ್ಕೆ ರಾಜಧಾನಿ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಸಜ್ಜಾಗಿದೆ. ಟೂರ್ನಿಯಲ್ಲಿ ಈಗಾಗಲೇ ಆಡಿರುವ ಮೂರು ಪಂದ್ಯಗಳಲ್ಲಿ ಒಂದರಲ್ಲಿ ಮಾತ್ರ ಜಯ ಸಾಧಿಸಿರುವ ಆಸ್ಟ್ರೇಲಿಯಾ ಅಂಕಪಟ್ಟಿಯಲ್ಲಿ ೭ನೇ ಸ್ಥಾನದಲ್ಲಿದ್ದರೆ, ಮೂರು ಪಂದ್ಯಗಳಲ್ಲಿ ಎರಡು ಗೆಲುವು ಸಾಧಿಸಿರುವ ಪಾಕಿಸ್ತಾನ ನಾಲ್ಕನೇ ಸ್ಥಾನದಲ್ಲಿದೆ. ಉಭಯತಂಡಗಳು ಇಂದು ಚಿನ್ನಸ್ವಾಮಿಯಲ್ಲಿ ಸೆಣಸಾಡಲಿದ್ದು.
ಚೇಸಿಂಗ್‌ಗೆ ಸಹಕಾರಿ ಎನಿಸಿರುವ ಚಿನ್ನಸ್ವಾಮಿ ಮೈದಾನದಲ್ಲಿ ಇದುವರೆಗೂ ೩೮ ಏಕದಿನ ಪಂದ್ಯಗಳು ನಡೆದಿವೆ. ಈ ಪೈಕಿ ಮೊದಲು ಬ್ಯಾಟ್ ಮಾಡಿದ ತಂಡ ೧೪ ಬಾರಿ ಜಯ ಸಾಧಿಸಿದರೆ ೨೦ ಪಂದ್ಯಗಳಲ್ಲಿ ಮೊದಲು ಬೌಲಿಂಗ್ ಆಯ್ಧುಕೊಂಡಿರುವ ತಂಡ ಗೆಲುವು ಸಾಧಿಸಿದೆ. ಚಿನ್ನಸ್ವಾಮಿ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ದಾಖಲಿಸಿದ್ದ (೩೮೩/೬) ಗರಿಷ್ಠ ದಾಖಲೆಯಾದರೆ, ದ.ಆಫ್ರಿಕಾ ವನಿತೆಯರ ವಿರುದ್ಧ ಭಾರತದ ವನಿತೆಯರು ದಾಖಲಿಸಿದ್ದ ೧೧೪ ರನ್ ಕನಿಷ್ಠ ಮೊತ್ತವಾಗಿದೆ. ಇನ್ನು ೨೦೧೧ರ ವಿಶ್ವಕಪ್‌ನಲ್ಲಿ ಬಲಿಷ್ಠ ಇಂಗ್ಲೆಂಡ್ ತಂಡದ ವಿರುದ್ಧ ೩ ವಿಕೆಟ್ ಬಾಕಿ ಇರುವಂತೆಯೇ ೩೨೮ ರನ್ ಕಲೆ ಹಾಕಿದ್ದ ಐರ್ಲೆಂಡ್ ತಂಡ ಚಿನ್ನಸ್ವಾಮಿ ಮೈದಾನದಲ್ಲಿ ಗರಿಷ್ಠ ರನ್ ಚೇಸ್ ಮಾಡಿದ್ದ ದಾಖಲೆ ಹೊಂದಿದೆ.
ವಿಶ್ವಕಪ್ ಟೂರ್ನಿ ಅ.೫ ರಂದು ಆರಂಭವಾಗಿದ್ದು, ಇಂದು ೧೮ನೇ ಪಂದ್ಯ ಚಿನ್ನಸ್ವಾಮಿಯಲ್ಲಿ ನಡೆಯಲಿದೆ. ಪ್ರಸಕ್ತ ಟೂರ್ನಿಯಲ್ಲಿ ಚಿನ್ನಸ್ವಾಮಿಯಲ್ಲಿ ನಡೆಯುತ್ತಿರುವ ಮೊದಲ ಪಂದ್ಯ ಇದಾಗಿದ್ದು, ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾದಿದ್ದಾರೆ. ಇನ್ನು ಈ ವಿಶ್ವಕಪ್‌ನ ಐದು ಪಂದ್ಯಗಳಿಗೆ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯ ವಹಿಸಲಿದೆ. ಡೇವಿಡ್ ವಾರ್ನರ್, ಮಿಚೆಲ್ ಮಾರ್ಶ್, ಸ್ಟೀವ್ ಸ್ಮಿತ್, ಮಾರ್ನಸ್ ಲಾಬುಶೇನ್, ಮಾರ್ಕಸ್ ಸ್ಟೋಯ್ನಿಸ್, ಗ್ಲೇನ್ ಮ್ಯಾಕ್ಸ್‌ವೆಲ್, ಜೋಶ್ ಇಂಗ್ಲಿಸ್ (ವಿ.ಕೀ), ಪ್ಯಾಟ್ ಕಮ್ಮಿನ್ಸ್ (ನಾ), ಮಿಚೆಲ್ ಸ್ಟಾರ್ಕ್, ಜೋಶ್ ಹೇಜಲ್ವುಡ್, ಆಯಡಂ ಜಂಪಾ. ಅಬ್ದುಲ್ಲಾ ಶಫೀಕ್, ಇಮಾಮ್ ಉಲ್ ಹಕ್, ಇಮಾಮ್ ಉಲ್ ಹಕ್, ಬಾಬರ್ ಅಜಂ (ನಾ), ಮೊಹಮ್ಮದ್ ರಿಜ್ವಾನ್ (ವಿ.ಕೀ), ಸೌದ್ ಶಕೀಲ್, ಇಫ್ತಿಕಾರ್ ಅಹ್ಮದ್, ಶದಾಬ್ ಖಾನ್, ಮೊಹಮ್ಮದ್ ನವಾಜ್, ಹಸನ್ ಅಲಿ, ಶಹೀನ್ ಅಫ್ರಿಧಿ, ಹ್ಯಾರೀಸ್ ರೌಫ್.