Monday, April 21, 2025
Google search engine

Homeರಾಜ್ಯಸುದ್ದಿಜಾಲಕನ್ನಡ ರಾಜ್ಯೋತ್ಸವ, ಗೀತ ಗಾಯನ ಕಾರ್ಯಕ್ರಮಕ್ಕೆ ಅಗತ್ಯ ಸಿದ್ದತೆ ಕೈಗೊಳ್ಳಲು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ

ಕನ್ನಡ ರಾಜ್ಯೋತ್ಸವ, ಗೀತ ಗಾಯನ ಕಾರ್ಯಕ್ರಮಕ್ಕೆ ಅಗತ್ಯ ಸಿದ್ದತೆ ಕೈಗೊಳ್ಳಲು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ

ಚಾಮರಾಜನಗರ: ಕನ್ನಡ ರಾಜ್ಯೋತ್ಸವವನ್ನು ನವೆಂಬರ್ 1ರಂದು ಆಚರಿಸಲು ಹಾಗೂ ಅಂದು ಕನ್ನಡಾಂಬೆಗೆ ನುಡಿ ನಮನ ಸಲ್ಲಿಸುವ ಗೀತಗಾಯನ ಕಾರ್ಯಕ್ರಮಕ್ಕೆ ಅಗತ್ಯ ಸಿದ್ದತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ನುಡಿ ನಮನ ಸಲ್ಲಿಸುವ ಗೀತ ಗಾಯನ ಕಾರ್ಯಕ್ರಮ ಸಂಬಂಧ ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನ.1ರಂದು ಜಿಲ್ಲಾಡಳಿತದ ವತಿಯಿಂದ ಎಲ್ಲರ ಸಹಕಾರದೊಂದಿಗೆ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ. ರಾಜ್ಯೋತ್ಸವ ಸಂದರ್ಭದಲ್ಲಿ ಕನ್ನಡಾಂಬೆಗೆ ನುಡಿ ನಮನ ಸಲ್ಲಿಸುವ ಗೀತ ಗಾಯನಗಳ ಕಾರ್ಯಕ್ರಮ ಏರ್ಪಾಡು ಮಾಡಬೇಕು. ಸರ್ಕಾರದ ನಿರ್ದೆಶನದಂತೆ 2023ರ ನವೆಂಬರ್ 1 ರಿಂದ 2024ರ ನವೆಂಬರ್ 1 ರವರೆಗೆ ಕರ್ನಾಟಕ ಸಂಭ್ರಮ-50ರ ಆಚರಣೆ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

ಜಿಲ್ಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಯಾವುದೇ ಲೋಪವಿಲ್ಲದೇ ಆಚರಣೆ ಮಾಡಬೇಕು. ತಾಲೂಕು, ಗ್ರಾಮ ಪಂಚಾಯಿತಿ ಶಾಲಾ ಕಾಲೇಜುಗಳು, ಬ್ಯಾಂಕುಗಳು ಸೇರಿದಂತೆ ಎಲ್ಲೆಡೆ ಆಚರಣೆ ಮಾಡಬೇಕು. ನುಡಿ ನಮನ ಗೀತೆಗಳ ಗಾಯನ ಕಾರ್ಯಕ್ರಮಕ್ಕೂ ಸೂಕ್ತ ತಾಲೀಮು ನಡೆಸಬೇಕು. ಈಗಿನಿಂದಲೇ ಸಿದ್ದತಾ ಕಾರ್ಯಗಳು ಆರಂಭವಾಗಬೇಕು ಎಂದರು. ತಾಲೂಕು ಹಂತದಲ್ಲಿಯೂ ಅಧಿಕಾರಿಗಳು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಯೋಜನೆಗೆ ಸಭೆ ನಡೆಸಿ ಜನಪ್ರತಿನಿಧಿಗಳ ಸಹಕಾರದೊಂದಿಗೆ ಸೂಕ್ತ ವ್ಯವಸ್ಥೆಗಳನ್ನು ಕೈಗೊಳ್ಳಬೇಕು. ವೈವಿದ್ಯಮಯ ಕಾರ್ಯಕ್ರಮಗಳ ಮೂಲಕ ಕನ್ನಡ ರಾಜ್ಯೋತ್ಸವ, ಕನ್ನಡ ಗೀತೆಗಳ ಗಾಯನ ಹಾಗೂ ಕರ್ನಾಟಕ ಸಂಭ್ರಮ-50ರ ಆಚರಣೆಗೆ ಪೂರಕವಾಗಿರುವ ಎಲ್ಲ ಸಿದ್ದತೆಗಳನ್ನು ಸಮರ್ಪಕವಾಗಿ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಯವರು ತಿಳಿಸಿದರು.

ಜಿಲ್ಲಾ ಕೇಂದ್ರದಲ್ಲಿ ಆಚರಿಸಲಾಗುವ ಕನ್ನಡ ರಾಜ್ಯೋತ್ಸವ ಆಯೋಜನೆಗೆ ಶಾಲಾ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಂದ ಕನ್ನಡ ಕುರಿತ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಏರ್ಪಾಡು ಮಾಡಬೇಕು. ಪ್ರತಿಯೊಂದು ವ್ಯವಸ್ಥೆಯು ಅಚ್ಚುಕಟ್ಟಾಗಿ ಇರಬೇಕು. ಈ ಹಿಂದಿನಂತೆಯೇ ಅರ್ಥಪೂರ್ಣವಾಗಿ ಕಾರ್ಯಕ್ರಮಗಳು ನಡೆಯಲು ಬೇಕಿರುವ ಎಲ್ಲ ಕಾರ್ಯಗಳನ್ನು ತ್ವರಿತವಾಗಿ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸರಸ್ವತಿ, ತಹಶೀಲ್ದಾರ್ ಬಸವರಾಜು, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಗುರುಲಿಂಗಯ್ಯ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular