Monday, April 21, 2025
Google search engine

Homeರಾಜ್ಯಸುದ್ದಿಜಾಲಪ್ರಥಮ ಚಿಕಿತ್ಸಾ ಪೆಟ್ಟಿಗೆ, ಮಾಸ್ಕ್, ಬಕೆಟ್‌ಗಳ ವಿತರಣೆ

ಪ್ರಥಮ ಚಿಕಿತ್ಸಾ ಪೆಟ್ಟಿಗೆ, ಮಾಸ್ಕ್, ಬಕೆಟ್‌ಗಳ ವಿತರಣೆ

ಮಡಿಕೇರಿ: ಮಡಿಕೇರಿ ವತಿಯಿಂದ ಕಸಬಾ ವೃತ್ತ ಹಾಗೂ ಚರಂಬಾಣೆ ವೃತ್ತಕ್ಕೆ ಸಂಬಂಧಿಸಿದ 52 ಅಂಗನವಾಡಿ ಕೇಂದ್ರಗಳಿಗೆ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಪ್ರಥಮ ಚಿಕಿತ್ಸಾ ಪೆಟ್ಟಿಗೆ, ಮಾಸ್ಕ್, ಬಕೆಟ್ ವಿತರಿಸಲಾಯಿತು. ಮಾತೃವಂದನಾ ಯೋಜನೆಯಡಿ ಕಾರ್ಮಿಕರಿಗೆ ಮೊಬೈಲ್‌ನಲ್ಲಿ ಅರ್ಜಿ ಸಲ್ಲಿಸುವ ಕುರಿತು ತರಬೇತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ರೆಡ್ ಕ್ರಾಸ್ ವತಿಯಿಂದ ಜಿಲ್ಲಾ ಮಟ್ಟದ ಆರೋಗ್ಯ ಶಿಬಿರವನ್ನು ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷ ರವೀಂದ್ರ, ಕಾರ್ಯದರ್ಶಿ ಮುರುಳಿ ಆಯೋಜಿಸಿದ್ದು, ಎಲ್ಲ ಫಲಾನುಭವಿಗಳಿಗೆ ತಲುಪುವಂತೆ ಸಹಕರಿಸುವಂತೆ ಮನವಿ ಮಾಡಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಮೇಲ್ವಿಚಾರಕಿ ಸವಿತಾ ಕೀರ್ತನ್ ಮಾತನಾಡಿ, ಗೃಹಲಕ್ಷ್ಮೀ ಯೋಜನೆಯಡಿ ಫಲಾನುಭವಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಸೂಕ್ತ ಸಹಕಾರ, ಮಾರ್ಗದರ್ಶನ ನೀಡುವಂತೆ ಕೋರಿದರು. ಇಲಾಖೆಯ ಯೋಜನೆಗಳನ್ನು ಸೂಕ್ತ ಸಮಯದಲ್ಲಿ ಸೂಕ್ತ ಫಲಾನುಭವಿಗಳಿಗೆ ತಲುಪಿಸುವಂತೆ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಲಾಯಿತು. ಕಾರ್ಯಕ್ರಮದಲ್ಲಿ ಪ್ಯಾಸಿಷನ್ ಅಭಿಯಾನದ ಜಿಲ್ಲಾ ಸಂಯೋಜಕಿ ಕಾವ್ಯ, ಮಾತೃ ವಂದನಾ ಸಂಯೋಜಕಿ ಚೈತ್ರಾ, ಕಸಬಾ ಹಾಗೂ ಚೇರಂಬಾಣೆ ವೃತ್ತದ ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular