Tuesday, April 22, 2025
Google search engine

Homeರಾಜ್ಯಸುದ್ದಿಜಾಲಬೆಳಗಾವಿ ಅಧಿವೇಶನದ ಕುರಿತು ಇನ್ನೆರಡು ದಿನಗಳಲ್ಲಿ ತೀರ್ಮಾನ: ಸ್ಪೀಕರ್ ಯು.ಟಿ ಖಾದರ್

ಬೆಳಗಾವಿ ಅಧಿವೇಶನದ ಕುರಿತು ಇನ್ನೆರಡು ದಿನಗಳಲ್ಲಿ ತೀರ್ಮಾನ: ಸ್ಪೀಕರ್ ಯು.ಟಿ ಖಾದರ್

ಶಿವಮೊಗ್ಗ: ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಕುರಿತು ಇನ್ನೆರಡು ದಿನಗಳಲ್ಲಿ ತೀರ್ಮಾನ ಮಾಡಲಾಗುವುದು ಎಂದು ಸ್ಪೀಕರ್ ಯು ಟಿ ಖಾದರ್ ತಿಳಿಸಿದ್ದಾರೆ. ಶಿವಮೊಗ್ಗ ಪ್ರವಾಸದಲ್ಲಿರುವ ಅವರು ಜಿಲ್ಲೆಯ ಮಹಾನಗರ ಪಾಲಿಕೆಯ ವತಿಯಿಂದ ಕುವೆಂಪು ರಂಗಮಂದಿರದಲ್ಲಿ ನಡೆದ ಯೋಗ ದಸರಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಖಾದರ್, ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಕುರಿತು ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ. ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಮಾಡಬಾರದೆಂಬ ತೀರ್ಮಾನ ಇನ್ನೂ ಮಾಡಿಲ್ಲ ಎಂದು ಹೇಳಿದರು.

ಬೆಳಗಾವಿಯಲ್ಲಿ ಎಷ್ಟು ದಿನ ಅಧಿವೇಶನ ನಡೆಯಲಿದೆ ಎಂಬುದನ್ನು ಸರ್ಕಾರ ತೀರ್ಮಾನಿಸಲಿದೆ. ನಾನು ಹಾಗೂ ಪರಿಷತ್ ಸಭಾಪತಿಗಳು ತೆರಳಿ ಅಧಿವೇಶನದ ಬಗ್ಗೆ ಪರಿಶೀಲನೆ ನಡೆಸುತ್ತೇವೆ. ಈ ಬಗ್ಗೆ ಬೆಳಗಾವಿ ಜಿಲ್ಲಾಧಿಕಾರಿ ಬಳಿ ಮಾತನಾಡಿದ್ದೇನೆ ಎಂದು ತಿಳಿಸಿದರು.

ಶಿವಮೊಗ್ಗದ ಯೋಗ ದಸರಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸ್ಪೀಕರ್, ಕೇವಲ ಪ್ರೇಕ್ಷಕರಾಗಿರದೇ ತಾವು ಕೂಡ ಯೋಗಾಭ್ಯಾಸ ನಡೆಸಿ ವಿವಿಧ ಯೋಗಾಸನವನ್ನು ಮಾಡಿದರು. ನಾನು ೬ನೇ ತರಗತಿಯಿಂದ ಯೋಗಾಸನ ಮಾಡಿಕೊಂಡು ಬಂದಿದ್ದೇನೆ. ಆಗಿನಿಂದಲೂ ನನಗೆ ಯೋಗದ ಪರಿಚಯವಿದೆ. ನನ್ನ ತಾಯಿಯವರ ತಂದೆ, ನನ್ನ ಅಜ್ಜ ಯೋಗ ಗುರುವಿನಲ್ಲಿಗೆ ಕರೆ ತರುತ್ತಿದ್ದರು. ಎಲ್ಲರೂ ಯೋಗಾಸನ ಮಾಡಬೇಕು. ಇದು ಆರೋಗ್ಯಕ್ಕೆ ಒಳ್ಳೆಯದು. ಆರೋಗ್ಯಕರ ಸಮಾಜ ನಿರ್ಮಾಣವಾಗುತ್ತದೆ ಎಂದು ಯೋಗಾಭ್ಯಾಸದ ಕುರಿತು ಮಾತನಾಡಿದರು.

ವಿಧಾನಸೌಧದ ಇತಿಹಾಸವನ್ನು ಎಲ್ಲರೂ ಅರಿಯಬೇಕು. ಇತರೆ ರಾಜ್ಯಗಳು ಸೇರಿದಂತೆ ವಿದೇಶದಲ್ಲೂ ಈ ಭವ್ಯ ಸೌಧದ ಕುರಿತು ಮಾಹಿತಿ ಪಸರಿಸಬೇಕು. ವಿಧಾನಸೌಧದ ವೀಕ್ಷಣೆಗಾಗಿ ಆಗಮಿಸಿದ ಕೇರಳ ರಾಜ್ಯದ ಈ ಬಡಮಕ್ಕಳು ಹಾಗೂ ಸ್ಥಳೀಯರಿಗೆ ಅನುಕೂಲ ಮಾಡಿಕೊಡಲು ಗೈಡ್ ವ್ಯವಸ್ಥೆಯನ್ನು ಸಹ ಮಾಡಲಾಗಿತ್ತು. ಮುಂದಿನ ದಿನಗಳಲ್ಲಿ ಪ್ರವಾಸಿಗರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು ಎಂದು ಹೇಳಿದ್ದರು.

RELATED ARTICLES
- Advertisment -
Google search engine

Most Popular